YOUNGEST MAYOR: ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಕಾಂಗ್ರೆಸ್ ಪಾಲು: ಅತೀ ಕಿರಿಯ ವಯಸ್ಸಿನ ತ್ರಿವೇಣಿ ಮೇಯರ್

ಬಳ್ಳಾರಿ: ಬಳ್ಳಾರಿ ಪಾಲಿಕೆ ಮೇಯರ್ ಆಗಿ ಅತೀ ಕಿರಿಯ ವಯಸ್ಸಿನ ಕಾಂಗ್ರೆಸ್ ತ್ರಿವೇಣಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ನಿಂದ ಮೂರು ಜನ ಮೇಯರ್ ಸ್ಥಾನಕ್ಕೆ ನಾಮ‌ಪತ್ರ ಸಲ್ಲಿಸಿದ್ದರು. ಆದರೆ ಕೊನೆ ಕ್ಷಣದಲ್ಲಿ ತ್ರಿವೇಣಿ. ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

೨೧ ವರ್ಷದ ತ್ರಿವೇಣಿ ಬಳ್ಳಾರಿ ಮೇಯರ್ ಆಗಿ ಆಯ್ಕೆಯಾಗಿದ್ದು, ಪಾಲಿಕೆ ಎರಡನೇ ಅವಧಿಯ ಮೇಯರ್ ಆಗಿ ತ್ರಿವೇಣಿ ಅವರು ಅಧಿಕಾರ ಸ್ವೀಕರಿಸಿದರು. ಉಪಮೇಯರ್ ಸ್ಥಾನವನ್ನು ಜಾನಕಮ್ಮ ಆಯ್ಕೆಯಾಗಿದ್ದಾರೆ.
ಒಟ್ಟು 39 ವಾರ್ಡ್ ಗಳ ಪೈಕಿ ಐದು ಪಕ್ಷೇತರ ಬೆಂಬಲದೊಂದಿಗೆ ಕಾಂಗ್ರೆಸ್ 26 ಸದಸ್ಯರಿದ್ದಾರೆ, ಕಳೆದ ವರ್ಷ ಕಾಂಗ್ರೆಸ್ ನಿಂದ ರಾಜೇಶ್ವರಿ ಸುಬ್ಬರಾಯುಡು ಮೇಯರ್ ಆಗಿ ಆಯ್ಕೆಯಾಗಿದ್ದರು. ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಹೊಸ ಮೇಯರ್ ಆಯ್ಕೆಗೆ ಇಂದು ಚುನಾವಣೆ ನಡೆದು ಅವರು ಆಯ್ಕೆಯಾಗಿದ್ದಾರೆ.

ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಉಪ ಮೇಯರ್ ಸ್ಥಾನ ಎಸ್ಟಿ ಮಹಿಳೆಗೆ ಮೀಸಲಾಗಿತ್ತು.

More News