ಬೆಂಗಳೂರು: ಸ್ಯಾಂಡಲ್ ವುಡ್ ನಟ ಸುದೀಪ್ ರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಪರಿಚಿತರು ನಟ ಸುದೀಪ್ ರನ್ನು ಉದ್ದೇಶಿಸಿ ಪತ್ರ ಬರೆದಿದ್ದು, ಖಾಸಗಿ ವಿಡಿಯೋವನ್ನು ಹರಿಯಬಿಡುವುದಾಗಿ ಪತ್ರದಲ್ಲಿ ಧಮಕಿ ಹಾಕಿದ್ದಾರೆ. ಅಲ್ಲದೆ ಪತ್ರದಲ್ಲಿ ನಟ ಸುದೀಪ್‌ಗೆ ಕೆಲ ಅವಾಚ್ಯ ಶಬ್ದಗಳಲ್ಲಿ ಬೈದು ಪತ್ರ ಬರೆದಿದ್ದಾರೆ. ಈ ಪತ್ರ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದ ಬೆನ್ನಲ್ಲೇ ಅವರು ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿ ದೂರು ನೀಡಿದ್ದಾರೆ.

ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುತ್ತೇವೆ ಎನ್ನುವುದರ ಜೊತೆಗೆ ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್ ನಲ್ಲಿ ದುಷ್ಕರ್ಮಿಗಳು ಬರೆದಿದ್ದಾರೆ ಎಂದು
ಸುದೀಪ್ ಮ್ಯಾನೇಜರ್ ಜಾಕ್ ಮಂಜು ರ ದೂರಿನ ಅನ್ವಯ ಅನ್ವಯ ಎಫ್ ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.
ಜಾಕ್ ಮಂಜು ನೀಡಿದ ದೂರನ್ನು ಆಧರಿಸಿ ಪುಟ್ಟೇನಹಳ್ಳಿ ಪೊಲೀಸರು ಐಪಿಸಿ 504, 506 ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿದ್ದು, ಬೆದರಿಕೆ ಪತ್ರದ ಮೂಲ ಹುಡುಕಾಟದಲ್ಲಿ ಇದ್ದಾರೆ.




