GOOD BYE TO CONGRESS: ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರಿದ ಮಾಜಿ ಶಾಸಕ ನಾಗರಾಜ ಛಬ್ಬಿ

ನವದೆಹಲಿ: ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿಯ ಕಲಘಟಗಿ ಕ್ಷೇತ್ರದಿಂದ ಟಿಕೇಟ್ ಸಿಗದೇ ಇದ್ದುದ್ದರಿಂದ ಬೇಸತ್ತು ಮಾಜಿ ಶಾಸಕ ನಾಗರಾಜ ಛಬ್ಬಿ ಅವರು ಇಂದು ಬಿಜೆಪಿ ಸೇರ್ಪಡೆಗೊಂಡರು.

ನವದೆಹಲಿಯಲ್ಲಿ ಇಂದು ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಿವಾಸದಲ್ಲಿ ಸೇರ್ಪಡೆಗೊಂಡ ಛಬ್ಬಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಗೋವಿಂದ್ ಕಾರಜೋಳ್ ಉಪಸ್ಥಿತರಿದ್ದರು.

ಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಯಾಗಿದ್ದ ನಾಗರಾಜ ಛಬ್ಬಿ ಕಾಂಗ್ರೆಸ್ ಪಕ್ಷದಲ್ಲಿನ ಆಗು ಹೋಗುಗಳ ಬೆಳವಣಿಗೆ ಬಗ್ಗೆ ಮನನೊಂದು, ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆಂದು ಪತ್ರದಲ್ಲಿ ಉಲ್ಲೇಖಿಸಿ, ಕೆಪಿಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಕಲಘಟಗಿ ಕ್ಷೇತ್ರಕ್ಕೆ ಸಂತೋಷ ಲಾಡ್ ಅವರಿಗೆ ಟಿಕೆಟ್ ನೀಡಿದ್ದಕ್ಕೆ ಅದೇ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ನಾಗರಾಜ ಛಬ್ಬಿಗೆ ಟಿಕೆಟ್ ನೀಡದ ಕಾರಣ ಮನನೊಂದು ಹೈಕಮಾಂಡ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

More News

You cannot copy content of this page