ಹುಬ್ಬಳ್ಳಿ: ನಾನು ರಾಜಕೀಯಕ್ಕೆ ಬಂದಿರುವುದು ಆಕಸ್ಮಿಕ. ನಾನು ಯಾವುದೇ ಸಂದರ್ಭದಲ್ಲಾದರೂ ರಾಜಕೀಯ ನಿವೃತ್ತಿ ಪಡೆದುಕೊಳ್ಳಬಹುದು. ಆದರೆ ಯಾರೇ ಆಗಲಿ ಗೌರವಯುತವಾಗಿ ಚುನಾವಣಾ ರಾಜಕೀಯದಿಂದ ಹೊರ ಹೋಗಬೇಕು. ಈ ರೀತಿ ಹೊರ ಹೋಗುವುದು ಸರಿಯಲ್ಲ
ಎಂದು ಜಗದೀಶ್ ಶೆಟ್ಟರ್ ಅಸಮಧಾನ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ ಶೆಟ್ಟರ್, ಒಬ್ಬ ಶಾಸಕನಾಗಿ ಎರಡು ವರ್ಷಗಳಿಂದ ಯಾವುದೇ ಸ್ಥಾನಮಾನ ಇಲ್ಲದೇ ಅಭಿವೃದ್ದಿ ಕೆಲಸಗಳನ್ನ ಮಾಡಿದ್ದೇನೆ.ಸಚಿವ ಸ್ಥಾನ ಇಲ್ಲದೆಯೂ ಕೆಲಸ ಮಾಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದೇನೆ. ನಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನು ರಾಜಕೀಯಕ್ಕೆ ಬಂದಿರುವುದೇ ಆಕಸ್ಮಿಕ. ಆದ್ರೆ ನಾನು ಯಾವುದೇ ಸಂದರ್ಭದಲ್ಲಾದರೂ ರಾಜಕೀಯ ನಿವೃತ್ತಿ ಪಡೆದುಕೊಳ್ಳಬಹುದು. ಹೀಗಾಗಿ ಯಾರೇ ಆಗಲಿ ಗೌರವಯುತವಾಗಿ ಚುನಾವಣಾ ರಾಜಕೀಯದಿಂದ ಹೊರ ಹೋಗಬೇಕು. ಈ ರೀತಿ ಹೊರ ಹೋಗುವುದು ಸರಿಯಲ್ಲ ಎಂದು ಮೊದಲ ಬಾರಿಗೆ ರಾಜಕೀಯ ನಿವೃತ್ತಿ ಬಗ್ಗೆ ಶೆಟ್ಟರ್ ಮಾತನಾಡಿದರು.
ರಾಷ್ಟ್ರೀಯ ನಾಯಕರನ್ನ ಭೇಟಿಯಾಗಲು ದೆಹಲಿಗೆ ತೆರಳುತ್ತಿದ್ದೇನೆ. ನನಗೆ ಸಕಾರಾತ್ಮಕ ಸ್ಪಂದನೆ ಸಿಗುವ ಭರವಸೆ ಇದೆ. ನಿನ್ನೆ ಪಕ್ಷದ ವರಿಷ್ಟರ ಜೊತೆ ಮಾತನಾಡಿದ್ದೇನೆ. ಟಿಕೆಟ್ ವಿಚಾರವಾಗಿ ನನಗೆ ವರಿಷ್ಠರು ಸ್ಪಷ್ಟತೆಯನ್ನ ನೀಡಬೇಕು. ನನ್ನ ಸಾಫ್ಟ್ ಕಾರ್ನರ್ ಇಲ್ಲಿಯ ವರೆಗೂ ಕರೆದುಕೊಂಡು ಬಂದಿದೆ. ರಾಷ್ಟ್ರೀಯ ಅಧ್ಯಕ್ಷರನ್ನ ಭೇಟಿಯಾಗಿ ಬಂದ ಮೇಲೆ ನನ್ನ ನಿರ್ಧಾರ ಪ್ರಕಟ ಮಾಡುತ್ತೇನೆ. ವರಿಷ್ಠರಿಂದ ನನಗೆ ಸಕಾರಾತ್ಮಕ ಸ್ಪಂದನೆ ಸಿಗುವ ಭರವಸೆ ಇದೆ ಎಂದು ಹೇಳುವ ಮೂಲಕ ಶೆಟ್ಟರ್ ಕುತೂಹಲ ಕೆರಳಿಸಿದರು.




