ಬೆಂಗಳೂರು : ಈ ಬಾರಿಯ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಲವು ವಿಶೇಷತೆಗಳನ್ನು ಹೊಂದಿದೆ. ಅದರಲ್ಲಿ ಪ್ರಮುಖವಾಗಿ ಬಳ್ಳಾರಿ ಜಿಲ್ಲೆ ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಕೆಕೆಆರ್ ಪಿ ಪಕ್ಷದ ಸಂಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರ ಪತ್ನಿ ಮತ್ತು ಅವರ ಸಹೋದರ ಸೋಮಶೇಖರ್ ರೆಡ್ಡಿ ನಡುವಿನ ಗುದ್ದಾಟಕ್ಕೆ ಸಾಕ್ಷಿಯಾಗಲಿದೆ.

ಬಳ್ಳಾರಿ ನಗರ ಕ್ಷೇತ್ರದಲ್ಲಿ ಭಾವ- ನಾದಿನಿ ನಡುವೆ ಗದ್ದುಗೆಗಾಗಿ ಫೈಟ್ ನಡೆಯಲಿದೆ. ಬಿಜೆಪಿಯಿಂದ ಗಾಲಿ ಸೋಮಶೇಖರ್ ರೆಡ್ಡಿ ಅಭ್ಯರ್ಥಿಯಾದರೆ, ಇನ್ನೊಂದೆಡೆ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದಿಂದ ಲಕ್ಷ್ಮೀ ಅರುಣಾ ರೆಡ್ಡಿ ಅಭ್ಯರ್ಥಿಯಾಗಿದ್ದಾರೆ.

ಈ ಚುನಾವಣೆ ಇಬ್ಬರ ಪಾಲಿಗೂ ಪ್ರತಿಷ್ಠೆಯ ಕಣವಾಗಿದೆ. ಜನಾರ್ಧನ ರೆಡ್ಡಿಯವರ ಕುಚುಕು ಗೆಳೆಯ ಬಿ ಶ್ರೀರಾಮುಲು ಬಳ್ಳಾರಿ ಗ್ರಾಮಾಂತರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಭಾವ – ನಾದಿನಿ ನಡುವೆ ಗದ್ದುಗೆಗಾಗಿ ಗುದ್ದಾಟ ನಡೆಯಲಿದೆ.




