KUKKE SUBRAMANYA TEMPLE: ಶ್ರೀ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಅದಾಯ ಗಳಿಕೆ

ಶ್ರೀ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಅದಾಯ ಗಳಿಕೆಯಾಗಿದೆ. 2022ರ ಎಪ್ರಿಲ್‌ನಿಂದ 2023ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 123 ಕೋಟಿ ರೂ. ಆದಾಯ ಗಳಿಸಿದೆ.
2022ರ ಎಪ್ರಿಲ್‌ನಿಂದ 2023ರ ಮಾರ್ಚ್ 31 ರ ತನಕದ ಆರ್ಥಿಕ ವರ್ಷದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 123 ಕೋಟಿ ರೂ. ಆದಾಯ ಗಳಿಸಿದೆ.
ಸರ್ಪದೋಷ ಪರಿಹಾರಕ್ಕೆ ಹೆಚ್ಚು ಹೆಸರುವಾಸಿಯಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದು ದರ್ಶನ ಮಾಡುತ್ತಾರೆ.
ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು ಕೃಷಿ ತೋಟದಿಂದ ಬಂದ ಆದಾಯ ಸೇರಿಸಿ ದಾಖಲೆ ಪ್ರಮಾಣದಲ್ಲಿ ಆದಾಯ ಸಂಗ್ರಹವಾಗಿದೆ.

More News