ಬೆಳಗಾವಿ: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಇಂದು ಮುಖಾಮುಖಿಯಾದರು. ಚುನಾವಣಾ ಕಣದಲ್ಲಿ ಬದ್ಧ ವೈರಿಗಳಾಗಿರುವ ಅವರು ಇಂದು ಮುಖಾಮುಖಿಯಾಗುತ್ತಿದ್ದಂತೆ ಕೈ ಕುಲುಕಿ ಮಾತುಕತೆ ನಡೆಸಿದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಎದುರು ಬದುರಾದರು. ಪರಸ್ಪರ ಹಸ್ತಲಾಘವ ಮಾಡಿ ಕೆಲ ಸಮಯ ಮಾತುಕತೆ ನಡೆಸಿದರು. ಸಿದ್ದರಾಮಯ್ಯ ಅವರು ಬೊಮ್ಮಾಯಿ ಅವರ ಭುಜ ತಟ್ಟಿದರು.
ಸಿಎಂ ಬಸವರಾಜ ಬೊಮ್ಮಾಯಿ ಅವರು, ಬೆಳಗಾವಿಯ ಯಮಕನಮರಡಿಯತ್ತ ಪ್ರಯಾಣ ಬೆಳಸಿದರು. ಮಾಜಿ ಸಚಿವ ಡಿ ಬಿ ಇನಾಮದಾರ ಅವರಿಗೆ ಅಂತಿಮ ನಮನ ಸಲ್ಲಿಸಿ ನೇಗಿನಹಾಳದಿಂದ ಸಿದ್ದರಾಮಯ್ಯ ಅವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ ಸಂದರ್ಭದಲ್ಲಿ ಮುಖಾಮುಖಿಯಾದರು.




