ಡ್ರಗ್ಸ್ ಪ್ರಕರಣ : ಆರ್ಯನ್ ಖಾನ್ ಜಾಮೀನು ಅರ್ಜಿ ವಜಾ, ಅರ್ಥರ್ ಜೈಲಿಗೆ ಶಾರುಖ್ ಪುತ್ರ

ಮುಂಬೈ :  ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್  ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮುಂಬೈ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.

ಮುಂಬೈನ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿಮಾಡುತ್ತಿದ್ದರು ಎಂಬ ಆರೋಪದ ಮೇಲೆ ಶಾರುಖ್ ಪುತ್ರನನ್ನು ಬಂಧಿಸಲಾಗಿತ್ತು. ಎನ್ ಸಿ ಬಿ ವಶದಲ್ಲಿದ್ದ ಆರ್ಯನ್ ಈಗ ಮತ್ತಷ್ಟು ಸಂಕಷ್ಟ ಎದುರಾಗಿದೆ. ನಿನ್ನೆಯಷ್ಟೇ ಎನ್ ಸಿ ಬಿ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಆರ್ಯನ್ ಸೇರಿದಂತೆ ಏಳು ಜನರನ್ನು ಮುಂಬೈ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು.

ಅಲ್ಲಿ ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಆರ್ಯನ್ ಸೇರಿದಂತೆ ಏಳಉ ಜನರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಾಲಯ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.

ಏಳು ಜನರನ್ನು ಆರ್ಥರ್ ಜೈಲಿಗೆ ನ್ಯಾಯಾಲಯದಿಂದ ರವಾನೆ ಮಾಡಲಾಗಿದೆ.

More News