ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಚುನಾವಣಾ ಆಯೋಗ ನೊಟೀಸ್ ನೀಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕಾತಿ, ವರ್ಗಾವಣೆ ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ರೇಟ್ ಕಾರ್ಡ್ ಜಾಹೀರಾತು ಪ್ರಕಟಿಸಿದ್ದಕ್ಕೆ ಚುನಾವಣಾ ಆಯೋಗ ನೊಟೀಸ್ ನೀಡಿದೆ.
ನಿನ್ನೆ ಸರ್ಕಾರದ ವಿರುದ್ಧ ರೇಟ್ ಕಾರ್ಡ್ ಜಾಹೀರಾತನ್ನು ಕಾಂಗ್ರೆಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ದೂರು ಆಧರಿಸಿ ನೊಟೀಸ್ ಚುನಾವಣಾ ಆಯೋಗ ದೂರು ನೀಡಿದೆ.
ನೇಮಕಾತಿ, ವರ್ಗಾವಣೆ, ಸರ್ಕಾರಿ ಹುದ್ದೆಗಳಿಗೆ ಒಂದೊಂದು ದರ ನಿಗದಿಪಡಿಸಿ ರೇಟ್ ಕಾರ್ಡ್ ಅನ್ನು ನಾನಾ ಮಾಧ್ಯಮಗಳಲ್ಲಿ ಜಾಹೀರಾತು ನೀಡಿತ್ತು. ಇದಕ್ಕೆ ಪೂರಕ ದಾಖಲೆ ಒದಗಿಸುವಂತೆ ಚುನಾವಣಾ ಆಯೋಗ ನೊಟೀಸ್ ಜಾರಿಮಾಡಿದೆ.
ಚುನಾವಣಾ ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆ ಎಂದು ದೂರು ನೀಡಿದ್ದ ಬಿಜೆಪಿ, ಈ ಹಿನ್ನೆಲೆಯಲ್ಲಿ ಅಗತ್ಯ ದಾಖಲೆ ಒದಗಿಸುವಂತೆ ಡಿಕೆಶಿ ಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.




