ನವದೆಹಲಿ :ಕೃಷ್ಣಾ,ಕಾವೇರಿ,ಮಹದಾಯಿ ನೀರಾವರಿ ಯೋಜನೆಗಳ ಸೇರಿದಂತೆ ಅಂತರರಾಜ್ಯ ಜಲ ವಿವಾದಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಂದು ಮಹತ್ವದ ಸಭೆ ನಡೆಸಿದರು.ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಕಾನೂನು ಮತ್ತು ತಾಂತ್ರಿಕ ತಜ್ಞರು ಪಾಲ್ಗೊಂಡಿದ್ದರು.
ಸಭೆಯಲ್ಲಿ ನೀರಾವರಿ ಸಚಿವರಾದ ಗೋವಿಂದ ಕಾರಜೋಳ,ಡಾ.ಕೆ ಸುಧಾಕರ್,ಸಂಸದ ಶಿವಕುಮಾರ್ ಉದಾಸಿ,ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್,ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್,ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ,ಶ್ಯಾಮ್ ದಿವಾನ್ ಸೇರಿದಂತೆ ಸಭೆಯಲ್ಲಿ ಭಾಗವಹಿಸಿದ್ದರು.
ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿ ಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ,ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಸೆಪ್ಟಂಬರ್ ತಿಂಗಳಿಗೆ ಕೃಷ್ಣಾ ನದಿ ನೀರು ಹಂಚಿಕೆ ಯುಕೆಪಿ-3 ಹಾಗೂ ತೆಲಂಗಾಣ ಸರ್ಕಾರ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಬರಲಿದೆ. ಸಮರ್ಥವಾಗಿ ವಾದ ಮಂಡಿಸುವುದರ ಬಗ್ಗೆ ಸಮಾಲೋಚನೆ ನಡೆಸಲಾಗಿದೆ.ಈ ವೇಳೆ ಕೃಷ್ಣ ನೀರಿನ ಬಳಕೆಗಾಗಿ ಅನುಮತಿ ಕೋರಿ ಎಲ್ ಎಲ್ ಪಿ ಅರ್ಜಿ ವಿಚಾರಣೆಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಮೇಕೆದಾಟು ಯೋಜನೆ ಸಂಬಂಧ ಮಧುರೈ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ.ನದಿ ನೀರು ಹಂಚಿಕೆ ಬಗ್ಗೆ ಅಧೀನ ನ್ಯಾಯಾಲ ದಲ್ಲಿ ಅರ್ಜಿ ವಿಚಾರಣೆ ನಡೆಸುವ ಅಧಿಕಾರ ವಿಲ್ಲಅರ್ಜಿಯನ್ನು ವಜಾಗೊಳಿಸುವಂತೆ ಮನವಿ ಮಾಡಲಾಗುವುದು.ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಕೊಡುವಂತೆ ಮನವಿಯನ್ನು ಸುಪ್ರೀಂ ಕೋರ್ಟ್ನಲ್ಲಿ ಮಾಡಲಿದ್ದೇವೆ ಎಂದು ಅವರು ಹೇಳಿದರು.
ಮಹದಾಯಿ ಯೋಜನೆ ಸಂಬಂಧ ತಕರಾರು ಅರ್ಜಿ ಸೆಪ್ಟೆಂಬರ್ ತಿಂಗಳಲ್ಲಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ.ಜೊತೆಗೆ ತಮಿಳುನಾಡಿನ ಅಕ್ರಮ ಯೋಜನೆಗಳ ಬಗ್ಗೆ ಅರ್ಜಿ ಸಲ್ಲಿಸಲು ತಯಾರಿ ನಡೆಸಿದ್ದೇವೆ.ಇನ್ನೊಂದು ವಾರದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಮಿಳುನಾಡು ಅಕ್ರಮ ಯೋಜನೆ ಬಗ್ಗೆ ಸುಪ್ರೀ ಕೋರ್ಟ್ ಮತ್ತು ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಅವರು ವಿವರಿಸಿದರು.