ಯಡಿಯೂರಪ್ಪ ಕಣ್ಣೀರನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗತ್ತೆ ಎಂದು ಈ ಹಿಂದೆಯೇ ಹೇಳಿದ್ದೆ. ಆ ಪಕ್ಷದ ನಾಯಕರಿಗೆ ಇಂದು ಅರಿವಾಗಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಕುಟುಕಿದರು.
“ಕೆಟ್ಟ ಉದ್ದೇಶ, ಸ್ವಾರ್ಥಕ್ಕೆ ತೆಗೆದುಕೊಂಡ ನಿರ್ಣಯ ಇಂದಿನ ಹೀನಾಯ ಪರಿಸ್ಥಿಗೆ ಕಾರಣ”
ಬಿಜೆಪಿಯ ಹೀನಾಯ ಸೋಲಿನ ಕುರಿತು ಹುಬ್ಬಳ್ಳಿ ಯಲ್ಲಿ ಮಾತನಾಡಿದ ಅವರು, ನಾನು ಹಿಂದೆ ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗತ್ತೆ ಎಂದಿದ್ದೆ. ಇವತ್ತು ಆ ಪಕ್ಷದ ನಾಯಕರಿಗೆ ಇದು ಅರಿವಾಗಿದೆ. ಅಧಿಕಾರ ಬಂದ ಸಂದರ್ಭದಲ್ಲಿ ಆ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದ್ರೆ ತಿನಬಾರದ ಪೆಟ್ಟು ತಿಂತಾರೆ. ನಾನು ಅವತ್ತು ಒಬ್ಬ ವ್ಯಕ್ತಿ ಉದ್ದೇಶಿಸಿ ಮಾತಾಡಿರಲಿಲ್ಲ. ಯಡಿಯೂರಪ್ಪ ಎಲ್ಲರಿಗೆ ಬೇಕಾದ ನಾಯಕರು. ಅವತ್ತು ಎಲ್ಲ ಸಮಾಜದ ನಾಯಕರು ಯಡಿಯೂರಪ್ಪ ರನ್ನು ಮುಂದುವರೆಸಿಬೇಕು ಎಂದಿದ್ರು. ಯಾವುದೋ ಕೆಟ್ಟ ಉದ್ದೇಶ, ಅಥವಾ ಸ್ವಾರ್ಥಕ್ಕೆ ತೆಗೆದುಕೊಂಡ ನಿರ್ಣಯ ಇಂದಿನ ಹೀನಾಯ ಪರಿಸ್ಥಿಗೆ ಕಾರಣ ವಾಗ್ದಾಳಿ ನಡೆಸಿದರು.

ಕೇಸರಿ ಪಡೆ ಎಂದು ಹೇಳಿ ಅಧಿಕಾರಕ್ಕೆ ಬಂದು, ಖಾವಿಧಾರಿಗಳನ್ನ ಸರಿಯಾಗಿ ನಡೆಸಿಕೊಳ್ಳಲಿಲ್ಲ. ಖಾವಿ ದಾರಿಗಳು ಪಾಠ ಮಾಡಿದ್ರು,ಅವರು ಪಾಠ ಕಲಿಲಿಲ್ಲ. ರಾಜ್ಯದ ಹಿರಿಯ ನಾಯಕರನ್ನು ಕಡೆಗಣಿಸಿದ್ದೆ ಬಿಜೆಪಿ ಇಂದಿನ ಸ್ಥಿತಿಗೆ ಕಾರಣ. ಯಡಿಯೂರಪ್ಪ, ಸವದಿ, ಶೆಟ್ಟರ್, ಈಶ್ವರಪ್ಪ ಕಡೆಗಣಿಸಿರೋದೆ ಇದಕ್ಕೆಲ್ಲ ಕಾರಣ. ಯಡಿಯೂರಪ್ಪ ಬದಲಾಯಿಸಿದ್ದೇ ಈ ಪರಿಸ್ಥಿತಿಗೆ ಕಾರಣ. ನಾನು ಹಿಂದೆ ಪರ್ಸೆಂಟೇಜ್ ಬಗ್ಗೆ ಮಾತನಾಡಿದಾಗ ಆ ಪಕ್ಷದ ನಾಯಕರು ದುರಹಂಕಾರಿಯಾಗಿ ಮಾತಾಡಿದ್ರು.
ಗುಂಡಾ ವೃತ್ತಿಯಲ್ಲಿ ದಾಳಿ ಮಾಡಿದ್ರು. ಅದರ ಪರಿಣಾಮವೇ ಇದಾಗತ್ತೆ ಎಂದರು.
ಪರೋಕ್ಷವಾಗಿ ಬಿಎಲ್ ಸಂತೋಷ್ ವಿರುದ್ದ ಗರಂ ಆದ ಸ್ವಾಮೀಜಿ , ಪಕ್ಷ ಕಟ್ಟಿದ ವ್ಯಕ್ತಿ ಮಾತು ಕೇಳಬೇಕು ಅಂದ್ರೆ ಏನು..? ಯಡಿಯೂರಪ್ಪರನ್ನು ಕೆಳಗಿಳಿಸೋವಾಗ ಹೇಗೆ ನಡೆಕೊಂಡರು ಎಂಬುದು ರಾಜ್ಯಕ್ಕೆ ಗೊತ್ತಿದೆ. ಬಿಜೆಪಿ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಚುನಾವಣೆ ಒಂದೇ ಮಾಡಿದ್ರು. ಜಗದೀಶ್ ಶೆಟ್ಟರ್, ಸವದಿಯನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.
“ಲಿಂಗಾಯತ ನಾಯಕನಿಗೆ ಉಪಮುಖ್ಯಮಂತ್ರಿ ನೀಡಬೇಕು”

ಕಾಂಗ್ರೆಸ್ ಸಿಎಂ ವಿಚಾರದ ಕುರಿತು ಮಾತನಾಡಿದ ಅವರು, ಲಿಂಗಾಯತ ನಾಯಕನಿಗೆ ಉಪಮುಖ್ಯಮಂತ್ರಿ ನೀಡಬೇಕು ಎಂದರು. ರಾಜ್ಯವನ್ನು ಸರಿಯಾದ ರೀತಿ ನಡೆಸೋ ವ್ಯಕ್ತಿ ಸಿಎಮ್ ಆಗಬೇಕು. ಸಮರ್ಥ,ಯೋಗ್ಯ ವ್ಯಕ್ತಿ ಸಿಎಂಆಗಬೇಕು,ಕರ್ನಾಟಕ ಒಂದು ದೃಷ್ಟಿಕೋನದಲ್ಲಿ ನೋಡುವವರು ಸಿಎಂ ಆಗಲಿ. ಲಿಂಗಾಯತದ ಉತ್ತರ ಕರ್ನಾಟಕದ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಇದು ನಮ್ಮ ಅಭಿಪ್ರಾಯ ಎಂದು ತಿಳಿಸಿದರು. ಲಿಂಗಾಯತ ನಾಯಕರು ಯಾರು ಎಂಬ ಪ್ರಶ್ನೆಗೆ ಉತ್ತರಿಸದ ಸ್ವಾಮೀಜಿ, ಸಾಕಷ್ಟು ಬುದ್ದಿಜೀವಿಗಳು ಇದ್ದಾರೆ, ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಮುಂದುವರಿದು ಮಾತನಾಡಿದ ಅವರು,ರಾಜ್ಯದಲ್ಲಿ ಏನಾಗಿದೆ ಅನ್ನೋ ದಾಖಲೆ ಇವೆ.
ಬ್ರಾಹ್ಮಣರ ಬಗ್ಗೆ ಮಾತಾಡೋಕೆ ನನಗೆ ಭಯ ಇಲ್ಲ. ನನಗೆ ಯಾರ ಅಂಕುಶವೂ ಇಲ್ಲ. ಬಹಳ ಮಾತಾಡಿ ಉಪಯೋಗ ಇಲ್ಲ. ರಾಜ್ಯದ ನಾಯಕರನ್ನು ಬಹಳ ಕೆಟ್ಟ ರೀತಿಯಲ್ಲಿ ನೋಡಿಕೊಂಡರು. ಅವರದು ಅವರೇ ಉಂಡರು. ದಕ್ಷಿಣ ಭಾರತದ ಕುದುರೆಗಳನ್ನು ಕತ್ತೆ ಅಂದುಕೊಂಡಿದ್ದೇ ಇದಕ್ಕೆಲ್ಲ ಕಾರಣ. ಕರ್ನಾಟಕದ ನಾಯಕರನ್ನು ಬಿಟ್ಟು ಏನಾದರೂ ಮಾಡ್ತೀನಿ ಅಂದುಕೊಂಡರು. ರಾಜ್ಯದ ಮತದಾರರು ಬುದ್ದಿಗೇಡಿಗಳಾ..? ರಾಷ್ಟ್ರ ನಾಯಕರಿಗೆ ಸರಿಯಾದ ಪಾಠ ಕಲಿಸಿದ್ರು.




