ಲಸಿಕೆ ಪೂರೈಸಲು ಕೇಂದ್ರ ಸಚಿವರಿಗೆ ಮನವಿ – ಸಿಎಂ

ನವದೆಹಲಿ – ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪೂರೈಸುವಂತೆ ಕೇಂದ್ರದ ಆರೋಗ್ಯ ಸಚಿವರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದರು. ನವದೆಹಲಿಯಲ್ಲಿ ಇಂದು ಕೇಂದ್ರ ಆರೋಗ್ಯ ಸಚಿವರಾದ ಮನಸುಖ ಮಾಂಡವಿಯಾ ಅವರನ್ನು ಇಂದು ಭೇಟಿ ಮಾಡಿದ ಸಿಎಂ  ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಲಸಿಕೆ ಕೊರತೆಯಾಗದಂತೆ ಪೂರೈಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಅವರು ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ , ಮುರುಗೇಶ್ ನಿರಾಣಿ,  ಡಾ. ಕೆ. ಸುಧಾಕರ್ , ಸಂಸದ ಶಿವಕುಮಾರ್ ಉದಾಸಿ , ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಉಪಸ್ಥಿತರಿದ್ದರು.

More News

You cannot copy content of this page