Sarath Babu Passes Away: ಅಮೃತವರ್ಷಿಣಿ ನಾಯಕ ನಟ ಶರತ್ ಬಾಬು ಇನ್ನಿಲ್ಲ

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಬಹುಭಾಷಾ ನಟ ಶರತ್ ಬಾಬು (71 ) ಇಹಲೋಕ ತ್ಯಜಿಸಿದ್ದಾರೆ. ಇತ್ತೀಚೆಗೆ ಅಷ್ಟೇ ವಯೋ ಸಹಜ ಆರೋಗ್ಯ ಸಮಸ್ಯೆ ಯಿಂದ ಬಳಲುತ್ತಿದ್ದ ಶರತ್ ಬಾಬು ರನ್ನು ಹೈದರಾಬಾದ್​ನ ಎಐಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಕೊನೆ ಉಸಿರೆಳೆದಿದ್ದಾರೆ.

ಆಂಧ್ರಪ್ರದೇಶದ ಅಮದಾಲವಲಸದಲ್ಲಿ ಜನಿಸಿದ ಶರತ್ ಬಾಬು ಅವರ ಪೂರ್ಣ ಹೆಸರು ಸತ್ಯಂ ಬಾಬು ದೀಕ್ಷಿತುಲು
ಎಂದು. 1973 ರಲ್ಲಿ ತೆಲುಗು ಸಿನಿಮಾರಂಗ ಪ್ರವೇಶಿಸಿದ ಇವರು 40 ವರ್ಷಗಳನ್ನು ಪೂರೈಸಿದ್ದು, 200 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ತೆಲುಗು ಮತ್ತು ತಮಿಳು ಸಿನಿಮಾರಂಗದಲ್ಲಿ ಜನಪ್ರಿಯ ನಟನಾಗಿರುವ ಶರತ್ ಬಾಬು ನಾಯಕನಾಗಿ ಪೋಷಕ ನಟನಾಗಿ ಕಾಣಿಸಿಕೊಂಡಿದ್ದಾರೆ. ಆಸ್ಪತ್ರೆ ಮೂಲಗಳ ಪ್ರಕಾರ ಕಳೆದೆರಡು ದಿನಗಳಿಂದ ಶರತ್ ಬಾಬು ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಶರತ್ ಬಾಬು ಅವರನ್ನು ಕಳೆದ ಒಂದು ತಿಂಗಳ ಹಿಂದಷ್ಟೇ ಹೈದರಾಬಾದ್​‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ಐಸಿಯುನಲ್ಲಿ ಸುಮಾರು ಒಂದು ತಿಂಗಳಿಗೂ ಅಧಿಕ ಕಾಲ ಚಿಕಿತ್ಸೆ ನೀಡಲಾಗಿತ್ತು.. ಇಂದು ಶರತ್ ಬಾಬು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 
ಇನ್ನು ನಟನ ನಿಧನ ವಿಚಾರ ತಿಳಿಯುತ್ತಿದ್ದಂತೆ ಅನೇಕರು ಕಂಬನಿ ಮಿಡಿದಿದ್ದಾರೆ. 

More News