MALLIKHARJUNA KHARGE ON PM MODI: ನೂತನ ಸೆಂಟ್ರಲ್ ಭವನ (ಸೆಂಟ್ರಲ್ ವಿಸ್ತಾ ಪ್ರೋಜೆಕ್ಟ್) ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಆಹ್ವಾನಿಸದೇ ಅಮಾಮಾನ : ಮಲ್ಲಿಕಾರ್ಜುನ ಖರ್ಗೆ ಕಿಡಿ

ನವದೆಹಲಿ: ಸಂಸತ್ ಭವನದ ಸೆಂಟ್ರಲ್ ವಿಸ್ತಾ ಪ್ರೊಜೆಕ್ಟ್ ಉದ್ಘಾಟನೆಯನ್ನು ಮೇ 2ರಂದು ನೇರವೇರಲಿದೆ. ಹೊಸ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸುತ್ತಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ರಾಷ್ಟ್ರಪತಿಯವರನ್ನು ಉದ್ಘಾಟನೆಗೆ ಕರೆಯದೇ ಅವರಿಗೆ ಅವಮಾನ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಂಗಿಕುಸ್ತಿಗೆ ಕಾರಣವಾಗಿದೆ ಎಂದು ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಸಂಸತ್ತಿನ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಅಂದಿನ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರನ್ನು ಆಹ್ವಾನಿಸಿರಲಿಲ್ಲ. ಈ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿಲ್ಲ ಎಂದು ಕಿಡಿಕಾರಿದ್ದಾರೆ.

ಭಾರತ ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿಲ್ಲ. ದೇಶದ ಗಣತಂತ್ರ ವ್ಯವಸ್ಥೆಯಲ್ಲಿ ಶಾಸಕಾಂಗ ಸರ್ವೋಚ್ಚ ಸಂಸ್ಥೆಯಾಗಿದೆ. ರಾಷ್ಟ್ರಪತಿಯವರು ಅತ್ಯುನ್ನತ ಶಾಸಕಾಂಗದ ಅಧಿಕಾರ ಹೊಂದಿದ್ದಾರೆ. ಅವರು ಸರ್ಕಾರ, ವಿಪಕ್ಷ ಮತ್ತು ದೇಶದ ಪ್ರತೀ ನಾಗರಿಕರನ್ನು ಪ್ರತಿನಿಧಿಸುತ್ತಾರೆ ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ರಾಷ್ಟ್ರಪತಿಯವರಿಗೆ ಅಗೌರವ ತೋರಿಸಿದೆ. ಬಿಜೆಪಿ ಮತ್ತು ಆರ್ ಎಸ್ ಎಸ್ ಸರ್ಕಾರದ ಅಡಿಯಲ್ಲಿ ಭಾರತದ ರಾಷ್ಟ್ರಪತಿಯವರ ಕಚೇರಿಯು ಸಾಂಕೇತಿಕವಾಗಿದೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು 20 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಸೆಂಟ್ರಲ್ ವಿಸ್ತಾ ಪ್ರೊಜೆಕ್ಟ್ ಅನ್ನು ಕೈಗೆತ್ತಿಕೊಳ್ಳಲಾಗಿದ್ದು, ಅದರ ಭಾಗವಾಗಿ ನೂತನ ಸಂಸತ್ ಭವನಕ್ಕೆ ಅಂದಾಜು 862 ಕೋಟಿ ರೂಪಾಯಿಯನ್ನು ನಿಗಧಿಪಡಿಸಲಾಗಿತ್ತು. ಆದರೆ 1,200 ಕೋಟಿ ರೂಪಾಯಿಗೂ ಹೆಚ್ಚು ಹಣ ಖರ್ಚು ಮಾಡಿ ನೂತನ ಸಂಸತ್ ಭವನವನ್ನು ನಿರ್ಮಿಸಲಾಗಿದೆ. ಇದನ್ನು ಮೇ 28ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.

More News