ಬೆಂಗಳೂರು, ಮೇ 23: ಜನರ ಆಶೋತ್ತರಗಳನ್ನು ಈಡೇರಿಸಲು, ಉತ್ತಮ ಆಡಳಿತ ನೀಡಲು ಅಧಿಕಾರಿಗಳು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು

ಸಭೆಯ ಮುಖ್ಯಾಂಶಗಳು:

- ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಪ್ರಭುಗಳು. ಅವರು ನಮ್ಮನ್ನು ಆರಿಸಿ ಕಳುಹಿಸಿದ್ದಾರೆ. ಅವರ ಪ್ರತಿನಿಧಿಗಳಾಗಿ ಇಲ್ಲಿಗೆ ಬಂದಿದ್ದೇವೆ. ಅವರ ಆಶೋತ್ತರಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಕರ್ತವ್ಯ.
- . ಜನರ ನಿರೀಕ್ಷೆಗೆ ಅನುಗುಣವಾಗಿ ಎಲ್ಲರೂ ಕೆಲಸ ಮಾಡಬೇಕಾಗಿತ್ತದೆ.
- ಸುಭದ್ರ ಸರ್ಕಾರ ಇಲ್ಲದಾಗ ಜನರ ಆಶೋತ್ತರಗಳನ್ನು ಈಡೇರಿಸಲು ಆಗುವುದಿಲ್ಲ.
- ಜನರ ಆಶೋತ್ತರಗಳನ್ನು ಅನುಷ್ಠಾನ ತರುವ ಮೂಲಕ ಅವರಿಗೆ ಸ್ಪಂದಿಸಸಬೇಕೆನ್ನುವ ಬಯಕೆ ಸರ್ಕಾರದ್ದು.
- ಉತ್ತಮ ಸರ್ಕಾರದ ನಿರೀಕ್ಷೆ, ಕಿರಿಕಿರಿ ಮಾಡದ ಸರ್ಕಾರ , ಚುರುಕಾಗಿರುವ ಸರ್ಕಾರ, ಭಿನ್ನ ಸರ್ಕಾರದ ಅಗತ್ಯವಿದೆ ಎಂದು ಜನ ಬಯಸಿದ್ದಾರೆ.
- ಹಿಂದಿನ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳು ನಿಂತುಹೋಗಿದೆ, ಭ್ರಷ್ಟಾಚಾರವಿದೆ ಎಂಬ ಭಾವನೆ ಜನರಲ್ಲಿತ್ತು. ಈ ಭಾವನೆಯನ್ನು ಹೋಗಲಾಡಿಸಲು ಅಧಿಕಾರಿಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು.
- ಗುಣಮಟ್ಟದ ಕಾಮಗಾರಿಗಳಾಗಬೇಕು, ಕಾಲಮಿತಿಯಲ್ಲೇ ಕೆಲಸಗಳಾಗಬೇಕು. ಕಣ್ಣುಮುಚ್ಚಿ ಕೊಂಡು ಸಹಿ ಹಾಕದೇ ಜನರ ಹಣವನ್ನು ಸರಿಯಾದ ರೀತಿಯಲ್ಲಿ ವೆಚ್ಚ ಮಾಡಬೇಕು.
- ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು. ಇವುಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮೇಲ್ವಿಚಾರಣೆ ಮಾಡಬೇಕು. ಕ್ಷೇತ್ರಗಳಿಗೆ ಕಾಲಕಾಲಕ್ಕೆ ಭೇಟಿ ನೀಡುವುದಲ್ಲದೇ ಕಚೇರಿಗಳಿಗೆ ಅನಿರೀಕ್ಷಿತ ಭೇಟಿಯನ್ನೂ ನೀಡಬೇಕು.
- ಹಿರಿಯ ಅಧಿಕಾರಿಗಳು ನಿಯಮಗಳನ್ನು ಪಾಲಿಸಬೇಕು. ಯೋಜನೆಗಳ ಕ್ಷಿಪ್ರ ಅನುಷ್ಠಾನವಾದರೆ ಜನರಿಗೆ ಪ್ರಯೋಜನವಾಗುತ್ತದೆ.
- ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕೆನ್ನುವುದು ಸರ್ಕಾರದ ಉದ್ದೇಶ.
- ಜನರ ಕಷ್ಟಗಳಿಗೆ ಸ್ಪಂದಿಸುವವರೇ ಮನುಷ್ಯರು ಎಂದು ಅರ್ಥಮಾಡಿಕೊಂಡು ಜನರ ನಿರೀಕ್ಷೆಗಳಿಗೆ ಸ್ಪಂದಿಸಬೇಕೆಂದು ಬಯಸುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.




