Nikhil Kumaraswamy: ಸೋಲಿನಿಂದ ಕಂಗೆಟ್ಟ ನಿಖಿಲ್ ಸಿನಿಮಾ ಕಡೆ ಮುಖ..? ಸೋಲೇ ಅಂತಿಮವಲ್ಲ ಎಂದು ರಾಜೀನಾಮೆ ನೀಡಿದ್ಯಾಕೆ..?

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಟ, ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.

ಸೋಲಿನ ಹೊಣೆಹೊತ್ತ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. ಆದ್ರೆ, ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಇದರ ಬೆನ್ನಲ್ಲೇ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.

ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಜೊತೆ ಸದಾ ನಿಲ್ಲುವೆ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ. ಸೋಲಿನಿಂದ ಕಂಗೆಡದೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ. ಸೋಲೇ ಅಂತಿಮವಲ್ಲ. ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ ಎಂದು ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದು, ನಿಖಿಲ್ ರ ನಂತರ ಮುಂದೆ ಯಾರು ಎಂಬ ಪ್ರಶ್ನೆ ಎದುರಾಗಿದೆ. ಇತ್ತ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಂಸದ ಪ್ರಜ್ವಲ್‌ ರೇವಣ್ಣ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. ಆದ್ರೆ, ಹೆಚ್ ಡಿ ಕುಮಾರಸ್ವಾಮಿ ಅವರು ಇದಕ್ಕೆ ಸಮ್ಮತಿಸ್ತಾರಾ ಎಂಬ ಪ್ರಶ್ನೆ ಪಕ್ಷದಲ್ಲಿ ಎದುರಾಗಿದೆ.

ರಾಜಕೀಯದಿಂದ ಸ್ವಲ್ಪ ದೂರ ಉಳಿದು ಸಿನಿಮಾ ದತ್ತ ನಿಖಿಲ್ ಹೆಚ್ಚು ಗಮನಹರಿಸುವ ಚಿಂತನೆ ನಡೆಸಿದ್ದಾರಂತೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗೂ ತಿಳಿಸಿದ್ದು, ಅವರ ಸಮ್ಮತಿ ಮೇರೆಗೇ ರಾಜೀನಾಮೆ ನೀಡಿದ್ದಾರೆಂದು ತಿಳಿದು ಬಂದಿದೆ.

More News