ಕಸ ಸಂಗ್ರಹಣಾ ವಾಹನ ಚಲಾಯಿಸುವ ಮೂಲಕ ಜಾಗೃತಿ ಮೂಡಿಸಿದ ಸಚಿವ ಬಿ. ಶ್ರೀರಾಮುಲು

ಚಿತ್ರದುರ್ಗ : ಕಸ ಸಂಗ್ರಹಣಾ ವಾಹನವನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ಸ್ವಯಂ ಚಲಾಯಿಸುವ ಮೂಲಕ ಚಾಲನೆ ನೀಡಿದರು. ಸಾರ್ವಜನಿಕರು ಸ್ಚಚ್ಚತೆಯನ್ನು ಮೈಗೂಡಿಸಿಕೊಂಡು ಸ್ವಚ್ಚ, ಸುಂದರ ಹಾಗೂ ಆರೋಗ್ಯಯುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದಲ್ಲದೆ, ಜಾಗೃತಿ ಮೂಡಿಸಿದರು.


ಮೊಳಕಾಲ್ಮೂರಿನ ಪಟ್ಟಣ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಕಸಸಂಗ್ರಹಣಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸ್ಚಚ್ಚ ಭಾರತ ಸ್ವಾಥ್ಯ ಭಾರತವಾಗಿದೆ. ಮಹಾತ್ಮ ಗಾಂಧಿಜಿಯವರ ಆಶಯವೂ ಇದಾಗಿತ್ತು ಎಂದರು.
ಮಕ್ಕಳಲ್ಲಿ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಬೇಕು. ಸಾರ್ವಜನಿಕರು ಸ್ವಚ್ಚತೆಯನ್ನು ಮೈಗೂಡಿಸಿಕೊಂಡು ತಮ್ಮ ಮನೆ, ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು‌. ಕಡ್ಡಾಯವಾಗಿ ಕಸವನ್ನು ಬೇರ್ಪಡಿಸಿ ಕಸಸಂಗ್ರಹಣಾ ವಾಹನಗಳಿಗೆ ನೀಡಬೇಕು ಎಂದುಮನವಿ ಮಾಡಿದರು.


ಗ್ರಾಮೀಣ ಪ್ರದೇಶಗಳಲ್ಲಿ ಕಡ್ಡಾಯವಾಗಿ ಶೌಚಾಯಗಳನ್ನು ಬಳಕೆ ಮಾಡಬೇಕು. ಸ್ಚಚ್ಚತೆ ಕಾಪಾಡಲು ಸರ್ಕಾರವು ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಸಾರ್ವಜನಿಕರು ಸಹಕರಿಸಿ, ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು. ನಂತರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

More News