Bangalore Police Commissioner: ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಬಿ ದಯಾನಂದ ಆಯ್ಕೆ

ಬೆಂಗಳೂರು ಪೊಲೀಸ್ ಕಮಿಷನರ್ ಯಾರಾಗ್ತಾರೆ.. ಎಂಬ ಸಾಕಷ್ಟು ಪೈಪೋಟಿ ನಡುವೆಯೇ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಬಿ ದಯಾನಂದರನ್ನು ನೇಮಕರಾಗಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸಾಮಾನ್ಯವಾಗಿ ಹೊಸ ಸರ್ಕಾರ ನೇಮಕಾದ ಬಳಿಕ ಅಧಿಕಾರಿ ವರ್ಗಗಳ ಬದಲಾವಣೆ ಸಹಜ ಪ್ರಕ್ರಿಯೆ. ಬಿ ದಯಾನಂದ್ ಅವರನ್ನು ಬೆಂಗಳೂರು ಪೊಲೀಸ್ ಆಯುಕ್ತರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಪ್ರತಾಪ ರೆಡ್ಡಿ ಅವರನ್ನು ಡಿಜಿಪಿ ಆಂತರಿಕ ಭದ್ರತಾ ವಿಭಾಗ ಅಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಇದರ ಜೊತೆಗೆ ಎಡಿಜಿಪಿ ಗುಪ್ತಚರ ಇಲಾಖೆಗೆ ಶರತ್ ಚಂದ್ರರನ್ನು ಹಾಗೂ ಎಂ ಎ ಸಲೀಂ ರನ್ನು ಸಿಐಡಿ ಡಿಜಿಪಿ (ಕ್ರಿಮಿನಲ್ ತನಿಖೆ) ಆಗಿ ಆಯ್ಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

More News