ಬೆಂಗಳೂರು, ಜೂನ್ 03 : ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆಗಾಗಿ ಸಚಿವ ಸಂತೋಷ್ ಲಾಡ್ ಅವರನ್ನು ಘಟನಾ ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ರೈಲು ದುರಂತದಲ್ಲಿ ಸುಮಾರು 300 ಜನರು ಮರಣ ಅಸುನೀಗಿರುವುದು ದುರದೃಷ್ಟಕರ. ಅಪಘಾತದ ಸುದ್ದಿಯಿಂದ ಅತೀವ ನೋವಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ರೈಲ್ವೆ ಇಲಾಖೆಯವರು ಅಪಘಾತದ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ. ಅಪಘಾತದಲ್ಲಿ ಕನ್ನಡಿಗರ ಸಾವು ನೋವು ಬಗ್ಗೆ ಯಾವುದೇ ಮಾಹಿತಿ ಬಂದಿರುವುದಿಲ್ಲ. ಘಟನೆಯ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಪ್ರಾಥಮಿಕ ಮಾಹಿತಿ ಪಡೆಕುಕೊಂಡು, ಕನ್ನಡಿಗರ ರಕ್ಷಣೆ ಹಾಗೂ ಅಗತ್ಯ ನೆರವು ಒದಗಿಸಲು ಘಟನಾ ಸ್ಥಳಕ್ಕೆ ಸಚಿವ ಸಂತೋಷ್ ಲಾಡ್ ಅವರು ತೆರಳಿದ್ದಾರೆ ಎಂದು ತಿಳಿಸಿದರು.




