ಬೆಂಗಳೂರು: ಈಜಿಪುರ ಮೇಲ್ಸೇತುವೆ ಯೋಜನೆಯನ್ನು ತಕ್ಷಣ ಪೂರ್ಣಗೊಳಿಸಬೇಕು. ಈ ಬಗ್ಗೆ ಅಗತ್ಯವಿರುವ ಆಡಳಿತಾತ್ಮಕ ನಿರ್ಣಯಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಡಿ ಕೆ ಶಿವಕುಮಾರ್ ಅವರು ತುಷಾರ್ ಗಿರಿನಾಥ್ ಅವರಿಗೆ ಸೂಚನೆ ಕೊಟ್ಟರು.
ಬೆಂಗಳೂರಿನ ಮುಂದಿನ 20 ವರ್ಷಗಳ ಅಗತ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಹೇಳಿದರು.
ಬೆಂಗಳೂರು ಬಗ್ಗೆ ದೂರದೃಷ್ಟಿ ಯೋಜನೆಗಳನ್ನು ರೂಪಿಸದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಬೆಂಗಳೂರಿನ ಕೆಲವೆಡೆ ಹೋರ್ಡಿಂಗ್ಸ್ ಇವೆ. ಇದಕ್ಕೆ ಅನುಮತಿ ಕೊಟ್ಟವರು ಯಾರು? ಒಂದೊಂದು ಪ್ರದೇಶಕ್ಕೆ ಒಂದೊಂದು ನೀತಿ ಹೇಗೆ ಎಂದು ಪ್ರಶ್ನಿಸಿದರು.
ಎಲ್ಲೆಡೆ ಅನ್ವಯ ಆಗುವಂತೆ ಸಾಮಾನ್ಯ ನೀತಿ ರೂಪಿಸುವಂತೆ ಸೂಚಿಸಿದರು.




