ಬೆಂಗಳೂರು: ಆಡಳಿತದಲ್ಲಿದ್ದಾಗ ಕಾರ್ಯಕರ್ತರನ್ನು ನೆನಪು ಮಾಡಿಕೊಳ್ಳದ ಬಿಜೆಪಿ ನಾಯಕರಿಗೆ ಅಧಿಕಾರ ಇಲ್ಲದಾಗ ನೆನಪಾಗಿದ್ದಾರೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ ದ್ವೇಷದ ರಾಜಕೀಯ ನಡೆಯಬಹುದು ಎಂಬ ಕಾರಣಕ್ಕಾಗಿ ಕಾನೂನು ಸಹಾಯವಾಣಿ ಪ್ರಾರಂಭಿಸಿದೆ.
ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ ಉದ್ಘಾಟಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಹೆಲ್ಪ್‍ಲೈನ್ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ, ನಮ್ಮ ಪರವಾಗಿ ಕೆಲಸ ಮಾಡುವವರ ಮೇಲೆ ರಾಜಕೀಯ ದ್ವೇಷದ ರಾಜಕೀಯ ಮಾಡುವ ಮುನ್ಸೂಚನೆಗಳು ಸಿಕ್ಕಿವೆ ಎಂದು ತಿಳಿಸಿದರು.

ಕಾನೂನು ಪ್ರಕೋಷ್ಠದವರು ಈ ಹಿನ್ನೆಲೆಯಲ್ಲಿ ಯೋಗೇಂದ್ರ ಮತ್ತು ಅವರ 100 ವಕೀಲರ ತಂಡವು ಸಹಾಯವಾಣಿ ಉದ್ಘಾಟಿಸುತ್ತಿದೆ ಎಂದು ಅವರು ತಿಳಿಸಿದರು. ಸದನದ ಒಳಗೆ ಮತ್ತು ಹೊರಗೆ ಇಂಥ ದೌರ್ನಜ್ಯದ ವಿರುದ್ಧ ಹೋರಾಟ ಸಂಘಟಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.
ನಮ್ಮ ಕಾರ್ಯಕರ್ತರು ವಿಶ್ವಾಸ- ಧೈರ್ಯ ಕಳೆದುಕೊಳ್ಳಬಾರದು. ಪಕ್ಷವು ಅನ್ಯಾಯ, ಅವ್ಯವಸ್ಥೆ ವಿರುದ್ಧ ಹೋರಾಟ ಮಾಡೋಣ ಎಂದು ಕಿವಿಮಾತು ಮತ್ತು ಧೈರ್ಯ ಹೇಳಿದರು. ದೌರ್ಜನ್ಯ ನಡೆದರೆ, ಸುಳ್ಳು ಕೇಸು ಹಾಕಿದರೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಎಂದು ತಿಳಿಸಿದರು.
ಬಿಜೆಪಿ ಕಾರ್ಯಕರ್ತರ ಒಳಿತು ಮತ್ತು ಅವರ ಹಕ್ಕುಗಳ ರಕ್ಷಣೆಯ ದೃಷ್ಟಿಯಿಂದ ಈ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ. ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಹೈಕೋರ್ಟ್ ಪೀಠವಿರುವ ಎಲ್ಲ ಜಾಗಗಳಲ್ಲಿ ಕಾನೂನು ಪ್ರಕೋಷ್ಠದ ಕಾರ್ಯಕರ್ತರು ಮತ್ತು ವಕೀಲರ ತಂಡದ ರಚನೆ ಆಗಿದೆ. ರಾಜ್ಯದ ನೂರಕ್ಕೂ ಹೆಚ್ಚು ವಕೀಲರು ಈ ಸಹಾಯವಾಣಿಯ ನಿರ್ವಹಣೆ ಮಾಡಲು ಸಹಕರಿಸುತ್ತಾರೆ ಎಂದು ತಿಳಿಸಿದರು.

ಕಾಂಗ್ರೆಸ್ಸಿನ ಈ ಸರಕಾರದಲ್ಲೂ ಪ್ರಮುಖ ಸಚಿವರು ಬ್ಯಾಕ್‍ಗ್ರೌಂಡ್ ಸೆಟ್ಟಿಂಗ್ ಮಾಡುವ ಹೇಳಿಕೆ ಕೊಡುತ್ತಿದ್ದಾರೆ. ನಾಳೆ ರಾಜಕೀಯ ದ್ವೇಷದಿಂದ ಮಾಡುವ ಬಂಧನಗಳಿಗೆ ಈಗಿನಿಂದ ವೇದಿಕೆ ಸಿದ್ಧಪಡಿಸುವ ಹೇಳಿಕೆ ಕೊಡುತ್ತಿದ್ದಾರೆ. ರಾಜ್ಯದ ಗೃಹಸಚಿವರು ಕರಾವಳಿ ಭಾಗದಲ್ಲಿ ಅತ್ಯಂತ ಪೂರ್ವಾಗ್ರಹದಿಂದ ಹೇಳಿಕೆ ಕೊಟ್ಟಿದ್ದಾರೆ. ಆ ಭಾಗದಲ್ಲಿ ಕೆಲಸ ಮಾಡುವ ಸಾಂಸ್ಕøತಿಕ ಸಂಘಟನೆಗಳನ್ನು ಹತ್ತಿಕ್ಕಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸುವುದಾಗಿ ಹೇಳಿದ್ದಾರೆ ಎಂದು ಆಕ್ಷೇಪಿಸಿದರು.
ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಅವರು ಮಾತನಾಡಿ, ವಿಶಿಷ್ಟ ಹೆಲ್ಪ್‍ಲೈನನ್ನು ಬಿಜೆಪಿ ಇವತ್ತು ಆರಂಭಿಸಲಿದೆ. ಇದರ ಮೂಲಕ ಬಿಜೆಪಿ ಕಾರ್ಯಕರ್ತರ ಸುರಕ್ಷತೆಗೆ ಮತ್ತು ಅನೇಕ ಸಂಕಷ್ಟದ ಪರಿಸ್ಥಿತಿಗೆ ನೆರವು ಲಭಿಸಲಿದೆ ಎಂದು ತಿಳಿಸಿದರು.




