NOT THIS TIME NEXT TIME I AM CM ASPIRANT: ಈ ಅವಧಿಗೆ ನಾನು ಸಿಎಂ ಆಕಾಂಕ್ಷಿಯಲ್ಲ: ಮುಂದಿನ ಬಾರಿಗೆ ನಾನು ಸಿಎಂ ಆಕಾಂಕ್ಷಿ

ಹಾವೇರಿ : ಈ ಅವಧಿಗೆ ನಾನು ಸಿಎಂ ಆಕಾಂಕ್ಷಿ ಅಲ್ಲ, ಮುಂದಿನ ಅವಧಿಗೆ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಸಚಿವ ಸತೀಶ್ ಜಾರಕಿಹೊಳಿ ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಸಚಿವ ಸತೀಶ್ ಜಾರಕಿಹೋಳಿ ಸುದ್ದಿಗಾರರೊಂಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಅವರಿಗೆ ಕುರ್ಚಿ ಬಿಟ್ಟು ಕೊಡಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ನಾನು ಮುಂದಿನ ಬಾರಿಗೆ ಸಿಎಂ ಸ್ಥಾನದ ಆಕಾಂಕ್ಷಿ ಎಂದು ತಿಳಿಸಿದರು.

ಗೃಹಜ್ಯೋತಿ ನೋಂದಣಿಯಲ್ಲಿ ತಾಂತ್ರಿಕ ತೊಂದರೆ ಆಗಿರುವ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಸಣ್ಣಪುಟ್ಟ ತಾಂತ್ರಿಕ ತೊಂದರೆ ಇರುತ್ತದೆ, ಕೆಲವು ದಿನಗಳಲ್ಲಿ ತಾಂತ್ರಿಕ ಸಮಸ್ಯೆ ಪರಿಹಾರವಾಗುತ್ತದೆ, ನೋಂದಣಿ ಮಾಡಿಕೊಳ್ಳಲು ಗಡುವು ಹಾಕಿಲ್ಲ, ಆರು ತಿಂಗಳು ಬಿಟ್ಟು ನೋಂದಣಿ ಮಾಡಿಕೊಳ್ಳಬಹುದು ಎಂದರು.
ಬೇರೆ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ, ಎಥೆನಾಲ್ ಗೆ ಅಕ್ಕಿ ಹೆಚ್ಚು ಉಪಯೋಗಿಸಲಾಗುತ್ತಿದೆ. ಕೇಂದ್ರ ಸರಕಾರ ಹೆಚ್ಚು ಪ್ರೋತ್ಸಾಹ ಕೊಡುತ್ತಿದೆ, ಬಡವರಿಗೆ ತಿನ್ನಲು ಅಕ್ಕಿ ನೀಡುತ್ತಿಲ್ಲ ಎಂದು ಆರೋಪಿಸಿದರು.

More News