ಬೆಂಗಳೂರು : ರಾಜ್ಯದ ಪ್ರತಿಷ್ಠಿತ KMF ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ನೂತನ ಸರ್ಕಾರ ಅಸ್ಥಿತ್ವಕ್ಕೆ ಬಂದ ಬೆನ್ನಲ್ಲೇ ಅಂದು ಅಧ್ಯಕ್ಷರಾಗಿದ್ದ ಬಾಲಚಂದ್ರ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಚುನಾವಣೆ ನಡೆಯಲಿದೆ. ಮಧ್ಯಾಹ್ನ ಒಂದು ಗಂಟೆಗೆ ಮತದಾನದ ಪ್ರಕ್ರಿಯೆ ಆರಂಭವಾಗಲಿದ್ದು, ಮತದಾನ ಮುಕ್ತಾಯದ ಬೆನ್ನಲ್ಲೇ ಫಲಿತಾಂಶ ಪ್ರಕಟವಾಗಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಈಗಾಗಲೇ KMF ಅಧ್ಯಕ್ಷ ಚುನಾವಣೆಗೆ ಚುನಾವಣಾಧಿಕಾರಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. KMF ಅಧ್ಯಕ್ಷ ಗಾದಿ ಮೇಲೆ ಮಾಜಿ ಶಾಸಕ ಭೀಮಾ ನಾಯ್ಕ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಬಹುತೇಕವಾಗಿ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆ ಆಗುವ ಸಾಧ್ಯತೆಗಳಿವೆ. ಭೀಮಾ ನಾಯ್ಕ್ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ. ಭೀಮಾನ ನಾಯ್ಕ್ ಅವರೊಂದಿಗೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಮಾಲೂರಿನ ಶಾಸಕ ನಂಜೇಗೌಡ ಕೂಡ ಪ್ರಯತ್ನ ನಡೆಸಿದ್ದರು. ಚುನಾವಣೆ ಸೋಲನ್ನು ಅನುಭವಿಸಿರುವ ಭೀಮಾನಾಯಕ್ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಸಮ್ಮತಿ ಸೂಚಿಸಿದ್ದರು ಎನ್ನಲಾಗಿದೆ. ಕೆಎಂಎಫ್ ಗೆ ೧೫ ಜನ ನಿರ್ದೇಶಕರು, ಸರ್ಕಾರದ ಓರ್ವ ನಾಮನಿರ್ದೇಶಕ ಹಾಗೂ ಓರ್ವ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಮತಚಲಾವಣೆ ಹಕ್ಕು ಹೊಂದಿದ್ದು, ಸಂಜೆ ಹೊತ್ತಿಗೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಶಾ ಭೇಟಿ ವೇಳೆ ರಾಜ್ಯದ ನೆನೆಗುದಿಗೆ ಬಿದ್ದಿರುವ ಯೋಜನೆಗಳು, ಅನುಮೋದನೆ ಬಾಕಿ ಇರುವ ಯೋಜನೆಗಳು, ವಿವಿಧ ಯೋಜನೆಗಳಿಗೆ ಕೇಂದ್ರದಿಂದ ಬಿಡುಗಡೆಯಾಗದಿರುವ ಅನುದಾನ, ಹೆಚ್ಚುವರಿ ಅನುದಾನಕ್ಕೆ ಮನವಿ ಮಾಡುವ ಸಾಧ್ಯತೆ ಇದೆ.




