ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಒಟ್ಟು ಮೂರು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಒಟ್ಟು ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ. ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ವಿಧಾನ ಪರಿಷತ್ ಚುನಾವಣಾಧಿಕಾರಿ ಇಂದು ಪರಿಶೀಲನೆ ನಡೆಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣ್ಣ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ ಸ್ವತಂತ್ರ ಅಭ್ಯರ್ಥಿಯಾಗಿ ತಮಿಳುನಾಡಿದ ಪದ್ಮರಾಜ್ ನಾಮಪತ್ರ ಸಲ್ಲಿಸಿದ್ದು, ಇವರ ನಾಮಪತ್ರಕ್ಕೆ ಯಾರೊಬ್ಬ ಶಾಸಕರು ಸೂಚಕರು, ಅನುಮೋದನೆಕರು ಸಹಿ ಮಾಡಿಲ್ಲ, ಈ ಹಿನ್ನೆಲೆಯಲ್ಲಿ ಪದ್ಮರಾಜ್ ಅವರ ನಾಮಪತ್ರ ಪರಿಶೀಲನೆ ವೇಳೆ ತಿರಸ್ಕೃತವಾಗಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ನ 3 ಅಭ್ಯರ್ಥಿಗಳು ಕಣದಲ್ಲಿ ಉಳಿಯಲಿದ್ದಾರೆ ಜೂನ್ 23 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ, ನಾಮಪತ್ರ ವಾಪಸ್ ಪಡೆದಿದ್ದಲ್ಲಿ ಅವಿರೋಧ ಆಯ್ಕೆಯನ್ನ ಚುನಾವಣಾಧಿಕಾರಿಗಳು ಘೋಷಣೆ ಮಾಡಲಿದ್ದಾರೆ.





