CM Siddaramaiah Meet AmitShah: ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ: ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ ಮುಖ್ಯಮಂತ್ರಿಗಳು

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಚರ್ಚಿಸಿದರು.

ಸೌಹಾರ್ದ ಭೇಟಿಯ ವೇಳೆ , “ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ.


ಈ ಕುರಿತು ಗುರುವಾರ ಬೆಳಗ್ಗೆ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರ ಜತೆ ಚರ್ಚಿಸುವುದಾಗಿ ಅಮಿತ್ ಶಾ ಅವರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.

More News

You cannot copy content of this page