No Politics in Rice Distribution: ಅಕ್ಕಿ ವಿತರಣೆಯಲ್ಲಿ ರಾಜಕೀಯ ಬೇಡ: ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ, ಜೂನ್ 22: ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ.

ಅಮಿತ್ ಶಾ ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದರು.

ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನ್ ನ್ನು ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

More News

You cannot copy content of this page