ದಕ್ಷಿಣ ಕನ್ನಡ ಜಿಲ್ಲೆಯ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಟೀಂ ಇಂಡಿಯಾದ ಆಟಗಾರ ಕೆ.ಎಲ್.ರಾಹುಲ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ದೇವಳಕ್ಕೆ ಆಗಮಿಸಿದ ಅವರು ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಶ್ರೀ ದೇವಳದ ಅರ್ಚಕರು ಅವರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಅವರು ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ಬಳಿಕ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು. ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಎಸ್ ಸ್ವಾಗತಿಸಿದರು.

ಕುಕ್ಕೆ ಸುಬ್ರಹ್ಮಣ್ಯನ ಅನನ್ಯ ಭಕ್ತರಾದ ಇವರು ಪ್ರತಿವರ್ಷ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆಯುತ್ತಾರೆ.
ತದನಂತರ ಕೆ.ಎಲ್.ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ರಾಹುಲ್‌ಗೆ ಹೆಗ್ಗಡೆಯವರು ಶಾಲು ಹೊದಿಸಿ ಬೆಳ್ಳಿಯ ನಾಣ್ಯ, ಗೋವಿನ ಕಂಚಿನ ಪ್ರತಿಮೆಯನ್ನು ನೀಡಿ ಗೌರವಿಸಿದರು. ಈ ವೇಳೆ ಹೆಗ್ಗಡೆ ಕುಟುಂಬದವರು ಜತೆಯಲ್ಲಿದ್ದರು.




