ಬೆಂಗಳೂರು : ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗದ ನಿರ್ದೇಶದ ಮೇರೆಗೆ ಬೆಂಗಳೂರು ಮಹಾ ನಗರ ಪಾಲಿಕೆಯ ವಾರ್ಡ್ ಗಳ ಪುನರ್ ವಿಂಗಡಣೆ ಕಾರ್ಯದಲ್ಲಿ ಬಿಬಿಎಂಪಿ ಸಿಬ್ಬಂದಿಗಳು ಮಗ್ನರಾಗಿದ್ದಾರೆ. ಈ ಕಸರತ್ತಿನ ಸಂದರ್ಭದಲ್ಲಿ ಬಿಬಿಎಂಪಿ ವಾರ್ಡ್ ಗಳ ಸಂಖ್ಯೆ ಹೆಚ್ಚಳವಾಗುವುದಿಲ್ಲ. ಅದು 243 ವಾರ್ಡ್ ಗಳಿಗೆ ಮಾತ್ರ ಸೀಮಿತವಾಗಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಾಯೋಗದ ಪ್ರಕಾರ ಮತದಾರರ ಮಾಹಿತಿ ಆಧರಿಸಿ ವಾರ್ಡ್ ಗಳ ಪುನರ್ ವಿಂಗಡೆ ಸಂದರ್ಭದಲ್ಲಿ ಗಡಿಗಳನ್ನು ಮಾತ್ರ ಪರಿಸ್ಕರಿಸಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭ ಕೆಲವು ವಾರ್ಡ್ ಗಳ ಹೆಸರು ಬದಲಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ, ಬಿಬಿಎಂಪಿಗೂ ಅದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದರು.

ನ್ಯ್ಯಾಯಾಲಯದ ನಿರ್ದೇಶನಗಳನ್ನು ಅನುಸರಿಸಿ ವಾರ್ಡ್ ಗಳ ಡಿಲಿಮಿಟೇಷನ್ ಮಾಡಲಾಗುತ್ತಿದೆ, ಇಲ್ಲಿ ಅಕ್ರಮ ನಡೆದಿದೆ ಎನ್ನು ಕೇವಲ ವದಂತಿ, ಇದರಲ್ಲಿ ಯಾವುದೇ ಸತ್ಯವಿಲ್ಲ, 2021ರಲ್ಲಿ ಜನಗಣತಿ ನಡೆಯದೇ ಇದ್ದುದ್ದರಿಂದ 2011ರ ಜನಗಣತಿ ಆಧಾರದ ಮೇಲೆ ಪುನರ್ ವಿಂಗಡನೆ ಮಾಡಲಾಗುತ್ತಿದೆ ಎಂದು ತುಷಾರ್ ಗಿರಿನಾಥ್ ತಿಳಿಸಿದರು.




