DCM DK Shivakumar: ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅಶ್ವತ್ ನಾರಾಯಣಗೆ ಗೊತ್ತಿಲ್ಲ: ಡಿಸಿಎಂ ಡಿಕೆಶಿ ತಿರುಗೇಟು

ನನಗೂ ಬೆಂಗಳೂರಿಗೂ ಇರುವ ಸಂಬಂಧದ ಇತಿಹಾಸದ ಬಗ್ಗೆ ಅಶ್ವತ್ ನಾರಾಯಣ ಅವರಿಗೆ ಗೊತ್ತಿಲ್ಲ. ಅದಕ್ಕೆ ಅವರು ಮಾತನಾಡುತ್ತಾರೆ. ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅವರು ತಿಳಿದುಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡ ಉತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಶ್ವತ್ ನಾರಾಯಣ ಅವರಿಗೆ ತಿರುಗೇಟು ನೀಡಿದರು.

ಉಳಿದಂತೆ ಕಾರ್ಯಕ್ರಮದಲ್ಲಿ ಡಿಸಿಎಂ ಅವರ ಮಾತುಗಳು;

ಇಂದು ನಾವು ಕೆಂಪೇಗೌಡ ಜಯಂತಿ ನಾವು ಆಚರಿಸುತ್ತಿದ್ದೇವೆ. ನಮ್ಮ ಸರ್ಕಾರ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನಿಸಿದಾಗ ಯಾವ ದಿನ ಜಯಂತಿ ಆಚರಿಸಬೇಕು ಎಂಬುದರ ಬಗ್ಗೆ ದೊಡ್ಡ ಚರ್ಚೆಯಾಗಿತ್ತು.

ಆಗ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ, ಇತಿಹಾಸ ತಜ್ಞರನ್ನು ಒಳಗೊಂಡಂತೆ ಸಮಿತಿ ರಚಿಸಲಾಯಿತು. ಈ ಸಮಿತಿ ಅಧ್ಯಯನ ಮಾಡಿ ಜೂನ್ 27ರಂದು ಕೆಂಪೇಗೌಡ ಜಯಂತಿ ಎಂದು ತೀರ್ಮಾನಿಸಿತು.

ಅಂದಿನಿಂದ ಸರ್ಕಾರ ಜೂನ್ 27ರಂದು ಕೆಂಪೇಗೌಡ ಜಯಂತಿ ಆಚರಣೆ ಮಾಡಿಕೊಂಡು ಬರುತ್ತಿದೆ.

ಅಶೋಕ್ ಅವರು ಮುಂದಾಳತ್ವದಲ್ಲಿ ಬೆಂಗಳೂರಿನ ಎಲ್ಲಾ ವಾರ್ಡ್ ಗಳಲ್ಲಿ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನಿಸಲಾಗಿತ್ತು. ಇದನ್ನು ಗಮನದಲ್ಲಿ ಇಟ್ಟುಕೊಂಡು ಈ ಕೆಂಪೇಗೌಡ ಜಯಂತಿ ಆಚರಣೆಯನ್ನ ರಾಜ್ಯಕ್ಕೆ ವಿಸ್ತರಿಸಿ, ರಾಜ್ಯದ ಎಲ್ಲೆಡೆ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನಿಸಿದೆವು.

ಇಂದು ಬೆಂಗಳೂರಿನಲ್ಲಿ ಹಾಗೂ ಹಾಸನದಲ್ಲಿ ಇಂದು ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯುತ್ತಿದೆ.

ಕೆಂಪೇಗೌಡ ಪ್ರಾಧಿಕಾರ ಸಭೆಯಲ್ಲಿ 75% ಗಿಂತ ಹೆಚ್ಚು ಒಕ್ಕಲಿಗರು ಇದ್ದಾರೆ. ಇದನ್ನು ನೋಡಿ ನಾಚಿಕೆ ಆಯಿತು. ಕೆಂಪೇಗೌಡ ಯಾವತ್ತೂ ಒಂದು ಸಮುದಾಯಕ್ಕೆ ಸೇರಿದವರಲ್ಲ. ಎಲ್ಲಾ ಜಾತಿ ಹಾಗೂ ಧರ್ಮಕ್ಕೆ ಸೇರಿದವರಾಗಿದ್ದಾರೆ.

ನಾವು ಹುಟ್ಟುವಾಗ ಇಂತಹ ಜಾತಿಯಲ್ಲಿ ಹುಟ್ಟುವ ಅರ್ಜಿ ಹಾಕುವುದಿಲ್ಲ. ನಮ್ಮ ತಂದೆ ತಾಯಿ ಜಾತಿ ಧರ್ಮ ನಾವು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ.

ಕೆಂಪೇಗೌಡರ ಆಚಾರ ವಿಚಾರ ಜಾತಿ ಮೇಲೆ ನಿಂತಿರಲಿಲ್ಲ. ಅವರು ಜಾತಿ ಮೇಲೆ ಕೆಲಸ ಮಾಡಿದ್ದಾರೆ ಬೆಂಗಳೂರಿನಲ್ಲಿ 52 ವಿವಿಧ ಸಮುದಾಯಗಳ ಪೇಟೆಗಳು ಆಗುತ್ತಿರಲಿಲ್ಲ.

ಸಮಾಜದಲ್ಲಿ ಎಲ್ಲಾ ವರ್ಗದವರಿಗೆ ಸ್ಥಾನಮಾನ ಸಿಗಲು ಶ್ರಮಿಸಿದ್ದಾರೆ.

ಇಂದು ನಾವು ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಮೂವರು ಮಹನೀಯರನ್ನು ಸ್ಮರಿಸಬೇಕು ಅದು ಕೆಂಪೇಗೌಡ, ಕೆಂಗಲ್ ಹನುಮಂತಯ್ಯ ಹಾಗೂ ಎಸ್.ಎಂ ಕೃಷ್ಣ.

ಇವರು ಕಟ್ಟಿರುವ ಬೆಂಗಳೂರನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕು. ಕೆಂಪೇಗೌಡರ ಸ್ಥಂಭ ಹೇಗೆ ಸ್ಮಾರಕವಾಗಿದೆಯೋ ಅದೇರೀತಿ ನಾವು ನಮ್ಮ ಕೆಲಸಗಳ ಮೂಲಕ ಸಾಕ್ಷಿ ಗುಡ್ಡೆ ನಿರ್ಮಿಸಬೇಕು.

ಬೆಂಗಳೂರು ಕೆಲವು ಭಾಗಗಳು ಮಾತ್ರ ಯೋಜಿತ ನಗರವಾಗಿದ್ದು, ಉಳಿದ ಭಾಗಗಳು ಯೋಜನೆ ರಹಿತವಾಗಿ ಬೆಳೆದುಕೊಂಡಿದೆ. ಇಲ್ಲಿನ ಹವಾಮಾನದಲ್ಲಿ ಬದುಕಿದವರು ಇದನ್ನು ಬಿಟ್ಟು ಹೋಗುವುದಿಲ್ಲ.

ಈ ಬೆಂಗಳೂರು ನೆಲದಲ್ಲಿ ಕೆಂಪೇಗೌಡ, ಕೆಂಗಲ್ ಹನುಮಂತಯ್ಯ, ಬಾಲಗಂಗಾಧರನಾಥ ಸ್ವಾಮೀಜಿ, ಶಿವಕುಮಾರ ಸ್ವಾಮಿ ಹುಟ್ಟಿದ್ದಾರೆ. ಇದು ಈ ನೆಲದ ವೈಶಿಷ್ಟ್ಯತೆ. ಇದನ್ನು ಧರ್ಮವಾಗಿ, ಅಭಿವೃದ್ಧಿ ಹಾಗೂ ಪ್ರಗತಿಯಾಗಿದೆ ಉಳಿಸಿಕೊಂಡು ಹೋಗಬೇಕು. ಹೀಗಾಗಿ ಈ ಬೆಂಗಳೂರು ಅಭಿವೃದ್ಧಿ ಮಾಡಬೇಕು.

ನಾನು ಬಹಳ ಉತ್ಸುಕತೆಯಿಂದ ಬೆಂಗಳೂರು ನಗರದ ಜವಾಬ್ದಾರಿ ಹೊತ್ತುಕೊಂಡಿದ್ದೇನೆ.

ಬೆಂಗಳೂರು ಅಭಿವೃದ್ಧಿ ಬಗ್ಗೆ ನಾನು ನಿಮ್ಮೆಲ್ಲರ ಸಲಹೆ ಕೇಳಿದ್ದೇನೆ. ನಿಮ್ಮ ಸಲಹೆ ಅಭಿಪ್ರಾಯ ನೀಡಿ. ನಿಮ್ಮ ಸಹಕಾರ ಆಶೀರ್ವಾದ ನಮ್ಮ ಮೇಲಿರಲಿ.

More News