GEETHA SHIVARAJKUMAR CONTESTING FOR LOKA SABHA ELECTION: ಸಕ್ರೀಯ ರಾಜಕಾರಣಕ್ಕೆ ವಾಪಾಸ್ಸಾಗಲಿದ್ದಾರಾ ಗೀತಾ ಶಿವರಾಜ್ ಕುಮಾರ್

ಬೆಂಗಳೂರು : ಸಕ್ರೀಯ ರಾಜಕಾರಣದಿಂದ ಹಿಂದೆ ಸರಿದಿದ್ದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಮತ್ತೆ ಕಮ್ ಬ್ಯಾಕ್ ಮಾಡಲಿದ್ದಾರಾ. ಈ ಅನುಮಾನಕ್ಕೆ ಅವರ ತಮ್ಮ ಸಚಿವ ಮಧು ಬಂಗಾರಪ್ಪ ನೀಡಿದ ಹೇಳಿಕೆಯೇ ವೈರಲ್ ಆಗಿದೆ.
ಕಾಂಗ್ರೆಸ್ ಪಕ್ಷದಿಂದ ಲೋಕಸಭೆ ಚುನಾವಣೆಗೆ ಅವರು ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಅದಕ್ಕೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ಟಿಕೇಟ್ ಸಂಬಂಧ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗುವಂತೆ ವರಿಷ್ಠರು ಅವರಿಗೆ ಸೂಚನೆ ನೀಡಿದ್ದು, ಅದರಂತೆ ಅವರು ಅವರು ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಈಗಾಗಲೇ ಅವರು ಕಾಂಗ್ರೆಸ್ ಸೇರಿದ್ದಾರೆ ಎಂದು ತಿಳಿಸಿದರು.

More News