ಬೆಂಗಳೂರು : ಒಂದೆಡೆ ವಿಧಾನ ಸಭೆ ಚುನಾವಣೆಯಲ್ಲಿನ ಹೀನಾಯ ಸೋಲು ಇನ್ನೊಂದೆಡೆ ಪಕ್ಷದಲ್ಲಿನ ಆಂತರಿಕ ಭಿನ್ನಮತದಿಂದ ಜರ್ಜರಿತವಾಗಿರುವ ಬಿಜೆಪಿ ಪಕ್ಷದಲ್ಲಿ ಇಂದು ಪ್ರಮುಖರ ಸಭೆ ನಡೆಸಲಾಯಿತು.
ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಬಹಿರಂಗ ಸಮರ ಸಾರಿರುವ ಸಂಸದ ಪ್ರತಾಪ್ ಸಿಂಹ್ ಮಾಜಿ ಸಚಿವ ರೇಣುಕಾಚಾರ್ಯ ಮುಂತಾದವರ ಹೇಳಿಕೆಯಿಂದ ಪಕ್ಷಕ್ಕಾಗುತ್ತಿರುವ ಹಿನ್ನೆಡೆ ಸಂಬಂಧ ಸುದೀರ್ಘ ಚರ್ಚೆ ನಡೆಸಲಿದ್ದಾರೆ.

ಬಿಜೆಪಿ ಕೇಂದ್ರ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಗೋವಿಂದ ಕಾರಜೋಳ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಪ್ರತಾಪಸಿಂಹ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಸ್. ಮುನಿರಾಜು, ಮಾಜಿ ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ಎ.ಎಸ್. ಪಾಟೀಲ್ ನಡಹಳ್ಳಿ, ವೀರಣ್ಣ ಚರಂತಿಮಠ, ಪರಾಜಿತ ಅಭ್ಯರ್ಥಿ ತಮ್ಮೇಶ್ ಗೌಡ ಅವರಿಗೆ ಇಂದು ಸಭೆಗೆ ಕರೆಯಲಾಗಿದೆ.

ಸಭೆಯಲ್ಲಿ ಬಹಿರಂಗ ಹೇಳಿಕೆ ನೀಡಿದವರು ಮತ್ತು ದೂರು ನೀಡಿದವರ ಜತೆ ಮಾಜಿ ಸಿಎಂಗಳಾದ ಯಡಿಯೂರಪ್ಪ, ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಚರ್ಚೆ ನಡೆಸಲಿದ್ದಾರೆ.

ಬಿಜೆಪಿ ಕಚೇರಿಗೆ ಆಗಿಮಿಸುತ್ತಿದ್ದಂತೆ ಯತ್ನಾಳ್ ಕಿಡಿ
ಮೊದಲು ನನಗೆ ಕೊಟ್ಟಿರುವ ನೋಟಿಸ್ ಸುದ್ದಿ ವಾಪಸ್ ತಗೊಳ್ಳಿ ಎಂದು ಯತ್ನಾಳ್ ಮಾಧ್ಯಮದವರ ಮೇಲೆ ಗರಂ ಆಗಿದ್ದರು. ನನಗೆ ನೋಟಿಸ್ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಲಿಸಿದ ಯತ್ನಾಳ್, ನನಗೆ ನೋಟಿಸ್ ಕೊಟ್ಟರೆ 10 ಲಕ್ಷ ಕೊಡುತ್ತೇನೆ ಎಂದು ಚಾಲೆಂಜ್ ಮಾಡಿದರು.