Protect the Interests of Industries: ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ದ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂನ್ 29: ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಮಂಜುನಾಥ್ ಹೆಚ್ ಅವರ ನೇತೃತ್ವದ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೆ.ಇ. ಆರ್.ಸಿ ವಿದ್ಯುತ್ ದರ ಹೆಚ್ಚಳ ಮಾಡಿತ್ತು. ಹೀಗಾಗಿ ಅವರಿಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಪೀಣ್ಯಾ ಕೈಗಾರಿಕಾ ಟೌನ್ ಶಿಪ್ ಪ್ರಾಧಿಕಾರ ಸ್ಥಾಪನೆ, ಕೆಐಎಡಿಬಿ ಕೈಗಾರಿಕಾ ಪ್ರದೇಶದ ಮೂಲಭೂತ ಸೌಕರ್ಯ ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಪರಿಶೀಲಿಸಿದ ನಂತರ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ಆಶ್ವಾಸನೆ ನೀಡಿದರು.

ಸಂಘದ ಉಪಾಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಚಂದ್ರಶೇಖರ್, ಜಂಟಿ ಕಾರ್ಯದರ್ಶಿ ಹೆಚ್.ಕೆ.ಮಲ್ಲೇಶ್, ಗೌಡ, ಖಜಾಂಚಿ ತಿಪ್ಪೇಶಪ್ಪ ಬಿ.ಸಿ ಮತ್ತಿತರರು ಉಪಸ್ಥಿತರಿದ್ದರು.

More News

You cannot copy content of this page