Modi Surname Defamation Case: ರಾಗಾಗೆ ಮತ್ತೇ ಹಿನ್ನಡೆ: ಸುಪ್ರೀಂ ಮೊರೆ ಹೋಗುವ ಸಾಧ್ಯತೆ

ಸೂರತ್ ಕೋರ್ಟ್ ನ ತೀರ್ಪನ್ನೇ ಎತ್ತಿ ಹಿಡಿದ
ಗುಜರಾತ್ ನ ಹೈ ಕೋರ್ಟ್ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ರಾಹುಲ್ ಗಾಂಧಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಅಥವಾ ಸಂಸದರಾಗಿ ತಮ್ಮ ಸ್ಥಾನಮಾನವನ್ನು ಅಮಾನತುಗೊಳಿಸಿರುವುದನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ ಎಂದು ಆದೇಶ ಹೊರಡಿಸಿದೆ.

ಕೋಲಾರದಲ್ಲಿ ಚುನಾವಣೆ ಸಂದರ್ಭದಲ್ಲಿ ಭಾಷಣ ಮಾಡುವ ವೇಳೆ, ಮೋದಿ ಸರ್ ನೇಮ್ ವಿರುದ್ಧ ರಾಹುಲ್‌ಗಾಂಧಿ‌ ವಿವಾದಾತ್ಮಕ ಹೇಳಿಕೆ ನೀಡಿದ್ದರು. ರಾಹುಲ್ ಗಾಂಧಿ ಹೇಳಿಕೆ ಬೆನ್ನಲೇ ಇದರ ವಿರುದ್ಧ
ಕೆಂಡಾಮಂಡಲರಾದ ಸೂರತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅಲ್ಲಿನ ಕೋರ್ಟ್‌ನಲ್ಲಿ ರಾಹುಲ್ ವಿರುದ್ಧ ಕೇಸ್ ಹಾಕಿದ್ದರು. ಮಾನನಷ್ಟ ಮೊಕದ್ದಮೆ ಪರಿಶೀಲಿಸಿದ ಸೂರತ್ ನ್ಯಾಯಾಲಯ ಸಂಸದ ಸ್ಥಾನ ದಿಂದ ಅಮಾನತುಗೊಳಿಸಿ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಆದೇಶ ಹೊರಡಿಸಿ 2 ವರ್ಷ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ಕಾನೂನು ಹೋರಾಟ ಪ್ರಾರಂಬಿಸಿದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಗುಜರಾತ್ ಹೈ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಬಗ್ಗೆ ಇಂದು ಆದೇಶ ಪ್ರಕರಟಿಸಿದ ಗುಜರಾತ್ ಹೈಕೋರ್ಟ್, ಸೂರತ್ ನ್ಯಾಯಾಲಯ ನೀಡಿದ ಆದೇಶ ಸರಿಯಾಗಿದೆ ಮತ್ತು ಕಾನೂನುಬದ್ಧವಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದು, ರಾಹುಲ್ ಗಾಂಧಿಗೆ ಹಿನ್ನಡೆಯಾಗಿದೆ.

ಶಿಕ್ಷೆ ತಡೆ ನಿರಾಕರಿಸೋದ್ರಿಂದ ರಾಹುಲ್ ಗಾಂಧಿ ಅವರಿಗೆ ಅನ್ಯಾಯವಾಗಲ್ಲ, ಶಿಕ್ಷೆಯನ್ನು ತಡೆಹಿಡಿಯಲು ಯಾವುದೇ ಸಮಂಜಸ ಕಾರಣ ಇಲ್ಲ. ವಿಧಿಸಲಾದ ಆದೇಶವು ಸರಿ ಮತ್ತು ಕಾನೂನುಬದ್ಧವಾಗಿದೆ. ಅನರ್ಹತೆಯು ಕೇವಲ ಸಂಸದರು ಮತ್ತು ಶಾಸಕರಿಗೆ ಸೀಮಿತವಾಗಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

ಇನ್ನು ಇತ್ತ ಗುಜರಾತ್ ಹೈಕೋರ್ಟ್‌ ಕೂಡ ಶಿಕ್ಷೆಗೆ ತಡೆ ನೀಡಲು ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ, ರಾಹುಲ್‌ ಗಾಂಧಿ ಸುಪ್ರೀಂ ಪೀಠಕ್ಕೆ ಅರ್ಜಿ ಸಲ್ಲಿಸುವ ಅವಕಾಶ ಇದೆ.

“ಮಧ್ಯಾಹ್ನ 3 ಕ್ಕೆ ರಾಜ್ಯ ಕಾಂಗ್ರೆಸ್ ನಿಂದ ಪ್ರತಿಭಟನೆ”

ಈ ಘಟನೆಯನ್ನೂ ಕೂಡ ರಾಜಕೀಯವಾಗಿ ಬಳಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇದೊಂದು ಕರಾಳ ದಿನ ಎಂದು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂದು ಕರಾಳ ದಿನ.
ನಮ್ಮ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಿ ಅದರ ತೀರ್ಪಿನ ಅನ್ವಯ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ.ಬಿಜೆಪಿ ಕುತಂತ್ರ ಖಂಡಿಸಿ ಇಂದು ಮಧ್ಯಾಹ್ನ 3 ಗಂಟೆಗೆ ಮಹಾತ್ಮ ಗಾಂಧಿ ಅವರ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರೆಲ್ಲ ಪ್ರತಿಭಟನೆ ಮಾಡುತ್ತೇವೆ.
ರಾಹುಲ್ ಗಾಂಧಿ ಅವರ ರಾಜಕೀಯ ಬೆಳವಣಿಗೆ ತಡೆಯಲು ಬಿಜೆಪಿ ಕುತಂತ್ರ ನಡೆಸಿದ್ದು, ಇದನ್ನು ನಾವು ಖಂಡಿಸುತ್ತೇವೆ.ರಾಹುಲ್ ಗಾಂಧಿ ಅವರು ದೇಶದ ಬಡವರ ಧ್ವನಿಯಾಗಿ, ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಹೋರಾಟ ಮಾಡುತ್ತಿದ್ದು, ಈ ಹೋರಾಟ ಹತ್ತಿಕ್ಕುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.ದೇಶದ ಐಕ್ಯತೆ ಸಮಗ್ರತೆ ಹಾಗೂ ಶಾಂತಿ ಸ್ಥಾಪನೆಗೆ ಭಾರತ ಒಗ್ಗೂಡಿಸಲು ಮುಂದಾಗಿರುವ ನಮ್ಮ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ಸಂಚು ರೂಪಿಸುತ್ತಿದೆ. ದೇಶದ ಎಲ್ಲಾ ವಿರೋಧ ಪಕ್ಷದ ನಾಯಕರು ರಾಹುಲ್ ಗಾಂಧಿ ಅವರ ಬೆನ್ನಿಗೆ ನಿಲ್ಲುತ್ತೇವೆ.ರಾಹುಲ್ ಗಾಂಧಿ ಅವರ ಹೋರಾಟವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಜನ ಸೂಕ್ತ ಉತ್ತರ ನೀಡುತ್ತಾರೆ.ಮೈಸೂರು, ಬೆಳಗಾವಿ, ಧಾರವಾಡ ಸೇರಿದಂತೆ ವಿಭಾಗೀಯ ಕೇಂದ್ರಗಳಲ್ಲಿ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡುತ್ತಿದ್ದೇನೆ.
ಬೆಂಗಳೂರು ಕಾರ್ಯಕರ್ತರು ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಲು ತಿಳಿಸಿದ್ದೇವೆ ಎಂದರು.

More News