Siddaramaiah Budget: ಇದೊಂದು ನಾಲಾಯಕ್ ಬಜೆಟ್ : ಆರ್ ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡಿದ ಬಜೆಟ್ ನಾಲಾಯಕ್ ಬಜೆಟ್ ಆಗಿದೆ. ಸುಳ್ಳು ಮೋಸ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದು ಮಾತ್ರ ಬಜೆಟ್ ಪುಸ್ತಕದಲ್ಲಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಘೋಷಣೆ ಮಾಡಿದ ಯೋಜನೆಗಳಿಗೆ ಬಜೆಟ್ ನಲ್ಲಿ ಅನುದಾನ ಇಟ್ಟಿಲ್ಲ ಎಂದರು.

ಮೇಕೆದಾಟು ಯೋಜನೆ ಹತ್ತು ಸಾವಿರ ಕೋಟಿ ಮಹದಾಯಿ ಯೋಜನೆಗೆ ಮೂರು ಸಾವಿರ ಕೋಟಿ ಅನುದಾನ ಕೊಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಿದ್ದಾರೆ.ಆದರೆ ಬಜೆಟ್ ನಲ್ಲಿ ಅನುದಾನ ಕೊಟ್ಟಿಲ್ಲ ಎಂದರು.

ಸಿದ್ದರಾಮಯ್ಯ ಮಂಡಿಸಿದ ಪೂರ್ಣ ಬಜೆಟ್ ನಲ್ಲಿ ಕೇಂದ್ರ ಸರ್ಕಾರ‌ ಹಾಗೂ ಪ್ರಧಾನ ಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಎಂದು ಟೀಕಿಸಿದರು.

More News