Karnataka Budget: 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು : ಸಿದ್ದರಾಮಯ್ಯ

ಬೆಂಗಳೂರು : ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಬಾರಿ ಮೊಟ್ಟೆ, ಶೇಂಗಾ ಚಿಕ್ಕಿ ಮತ್ತು ಬಾಳೆಹಣ್ಣು ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಅವರು ಇಂದು ಮಂಡನೆ ಮಾಡಿದ ಬಜೆಟ್ ನಲ್ಲಿ ಈ ಘೋಷಣೆ ಮಾಡಿದ್ದು, 9 ಮತ್ತು 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದನ್ನು ವಿಸ್ತರಿಸಲಾಗುವುದು, ಇದಕ್ಕಾಗಿ 280 ಕೋಟಿ ರೂ ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಈ ಸೌಲಭ್ಯ ಸಿಗಲಿದೆ ಎಂದು ತಿಳಿಸಿದರು. ಒದಗಿಸಲಾಗುವುದು
ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ನ್ಯೂನತೆ ಹೋಗಲಾಡಿಸಲು ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ ವೆಚ್ಚದಲ್ಲಿ ಕಲಿಕಾ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿದರು.

More News