ಬೆಂಗಳೂರು : ಚುನಾವಣೆಯಲ್ಲಿ ಬೆನ್ನಿಗೆ ನಿಂತು ಅಮೋಘ ರೀತಿಯಲ್ಲಿ ಗೆದ್ದು ಅಧಿಕಾರದ ಗದ್ದುಗೆ ಏರಲು ಸಹಕಾರ ನೀಡಿದ್ದಾರೆ ಎನ್ನಲಾದ ಅಲ್ಪಸಂಖ್ಯಾತ ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಪರ್ ಗಿಫ್ಟ್ ನೀಡಿದ್ದಾರೆ.
1-8 ತರಗತಿಯವರೆಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವೇತನ ನೀಡಲು ಸುಮಾರು 60 ಕೋಟಿ ಮೀಸಲಿಡಲಾಗಿದೆ. ಸುಮಾರು 10 ಹೊಸ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಈಗಿನ 62 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಶಾಲೆಗಳನ್ನು ಉನ್ನತೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು, 6-12ನೇ ತರಗತಿಯವರೆಗೆ ಉನ್ನತೀಕರಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಅದೇ ರೀತಿಯಲ್ಲಿ ಮೌಲಾನಾ ಆಜಾದ್ ಶಾಲೆಗಳ ಸ್ವತಃ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್ ಓದುವುದಾದರೆ ಅವರಿಗೆ ಸಾಲ ಸೌಲಭ್ಯ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ವ್ಯಾಸಂಗ ಮಾಡಲು 2% ಬಡಿ ದರದಲ್ಲಿ ಸಾಲ, ಅಲ್ಪಸಂಖ್ಯಾತ ಯುವಕರಿಗೆ ಕೌಶಲ್ಯ ತರಬೇತಿ ಅದಕ್ಕಾಗಿ ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೌಶಲ್ಯಭಿವೃದ್ದಿ ತರಬೇತಿಗೆ ನಾಲ್ಕು ಕೋಟಿ ಮೀಸಲಿಡಲಾಗುವುದು ಎಂದು ಘೋಷಿಸಿದ್ದಾರೆ.

ಬೆಂಗಳೂರಿನ ಹಜ್ ಭವನದಲ್ಲಿ IAS/KAS ತರಬೇತಿ ಪ್ರಾರಂಭಿಸಲಾಗುವುದು, ವಸತಿ ಸಹಿತ ತರಬೇತಿ ನೀಡಲು ನಿರ್ಧಾರಿಸಲಾಗಿದೆ, ವಿವಿ ರ್ಯಾಕಿಂಗ್ ಪಡೆದ ಅಲ್ಪಸಂಖ್ಯಾತ 250 ವಿಧ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡಲು ಶೂನ್ಯ ಬಡ್ಡಿಯಲ್ಲಿ ಸಾಲ, ಅರ್ಧಕ್ಕೆ ನಿಂತ ಶಾದಿಮಹಲ್ ಮರು ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದು ಇದಕ್ಕಾಗಿ 54 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಹಿಂದುಯೇತರ ಧಾರ್ಮಿಕ ಸಂಸ್ಥೆಗಳ ತಸ್ತಿಕ ಹಣವನ್ನು ಹೆಚ್ಚಳ ಮಾಡಲಾಗಿದ್ದು, 48 ಸಾವಿರ ಕೋಟಿಯಿಂದ 60 ಸಾವಿರ ಕೋಟಿಗೆ ಹೆಚ್ಚಳ ಮಾಡಲಾಗಿದೆ. ಅಲ್ಪಸಂಖ್ಯಾತ ಕಾಲೋನಿ ಅಭಿವೃದ್ಧಿಗೆ 360 ಕೋಟಿ ಮೀಸಲು, ಸ್ವಾವಲಂಬಿ ಸಾರಥಿ ಯೋಜನೆ ಅಲ್ಪಸಂಖ್ಯಾತರಿಗೂ ಅನ್ವಯ, ನಾಲ್ಕು ಚಕ್ರಗಳ ವಾಹನ ಖರೀದಿಗೆ 3 ಲಕ್ಷ ಸಹಾಯಧನ ನೀಡಲಾಗುವುದು.
ಕ್ರಿಶ್ಚಿಯನ್ ನಿಗಮ ಮಂಡಳಿ ಸ್ಥಾಪನೆಗೆ 100 ಕೋಟಿ ಮೀಸಲು, ಜೈನರ ಪುಣ್ಯಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ಮೀಸಲು, ರಾಜ್ಯದಲ್ಲಿ 49,000 ವಕ್ಫ್ ಬೋರ್ಡ್ ಆಸ್ತಿಗಳ ಸಂರಕ್ಷಣೆಗೆ ಕ್ರಮ, ವಕ್ಫ್ ಆಸ್ತಿ ಸಂರಕ್ಷಣೆಗೆ 50 ಕೋಟಿ ಹಣ ಮೀಸಲಿಡಲಾಗಿದೆ. ಹಾಗೆಯೇ ಹಲಸೂರು ಗುರುದ್ವಾರ ಅಭಿವೃದ್ಧಿಗೆ 25 ಕೋಟಿ ಮೀಸಲಿಡಲಾಗಿದೆ.




