Basavaraj Bommai: ಕೋರ್ಟ್ ಆದೇಶದ ವಿರುದ್ಧ ಪ್ರತಿಭಟನೆ ಮಾಡಿದರೆ ನ್ಯಾಯಾಂಗ ನಿಂದನೆಯಲ್ಲವೇ?: ಬೊಮ್ಮಾಯಿ

ಬೆಂಗಳೂರು: ಕೋರ್ಟ್ ಆದೇಶ ಎಲ್ಲರೂ ಗೌರವಿಸಬೇಕು, ಸಮಾನತೆ, ಕಾನೂನು ಬಗ್ಗೆ ರಾಹುಲ್ ಗಾಂಧಿ ಬಹಳ ಮಾತನಾಡುತ್ತಾರೆ ಆದರೆ ಈಗ ಮಾಡುತ್ತಿರುವುದೇನು? ಕೋರ್ಟ್ ಆದೇಶದ ವಿರುದ್ಧ ಪ್ರತಿಭಟನೆ ಮಾಡಿದರೆ ಅನ್ಯಾಂಗ ನಿಂದನೆಯಲ್ಲವೇ? ಸಂವಿಧಾನ, ಪ್ರಜಾಪ್ರಭುತ್ವದ ವಿರುದ್ಧ ಹೋಗುತ್ತಿದ್ದಾರೆ, ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೂ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ಟೀಕಿಸಿದರು.

ಪ್ರತಿಪಕ್ಷ ನಾಯಕ ಇಲ್ಲದಿದ್ದಕ್ಕೆ ಏನಾಯಿತು, ಬಜೆಟ್ ಮಂಡನೆಗೂ ಇದಕ್ಕೂ ಸಂಬಂಧ ಇಲ್ಲ, ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ಇಲ್ಲದೆ ಐದು ಬಜೆಟ್ ಮಂಡನೆಯಾಗಿದೆ ಎಂದು ಪ್ರತಿಪಕ್ಷ ನಾಯಕರ ಆಯ್ಕೆ ವಿಳಂಬವನ್ನು ಬಸವರಾಜ ಬೊಮ್ಮಾಯಿ ಸಮರ್ಥಿಸಿಕೊಂಡರು.

More News