ಹುಬ್ಬಳ್ಳಿ: ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣವನ್ನು ನೆನೆದು ಹುಬ್ಬಳ್ಳಿಯ ವರೂರಿನ ಜೈನಮುನಿ ಗುಣಧರನಂದಿ ಮಾಹಾರಾಜ್ ಸ್ವಾಮೀಜಿ ಕಣ್ಣೀರು ಹಾಕಿದ್ದಾರೆ.
ಗಳಗಳನೆ ಕಣ್ಣೀರು ಸುರಿಸಿದ ಜೈನಮುನಿ ಗುಣಧರನಂದಿ ಮಹಾರಾಜ್, ಶಾಂತಿಪ್ರಿಯ ಸಮಾಜದ ಸ್ವಾಮೀಜಿಯ ಬರ್ಬರ ಹತ್ಯೆ ತೀವ್ರ ನೋವು ತಂದಿದೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ಸಿಎಂ ಸಿದ್ದರಾಮಯ್ಯ ಅವರು ಇದುವರೆಗೂ ಸಂತಾಪ ಸೂಚಿಸದಿರುವುದು ಆಘಾತವಾಗಿದೆ ಎಂದರು.

ಈ ಪ್ರಕರಣದ ಸಂಬಂಧ ಪೊಲೀಸರು ಸೂಕ್ತ ರೀತಿಯ ತನಿಖೆ ನಡೆಸಬೇಕು, ಸರ್ಕಾರಕ್ಕೆ ನಮ್ಮಂತಹ ಅಲ್ಪಸಂಖ್ಯಾತರು ಬೇಡವಾಗಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ಕೊಡಬೇಕು, ಕೊಲೆಗಡುಕರಿಗೆ ಶಿಕ್ಷೆ ಆಗಬೇಕು ಎಂದರು.

ಈ ಕುರಿತು ರಾಜ್ಯ ಸರ್ಕಾರ ಲಿಖಿತ ಭರವಸೆ ಕೊಡುವವರೆಗೆ ಅನ್ನ ಆಹಾರ ತ್ಯಾಗ ಮಾಡುತ್ತೇನೆ ಎಂದು ತಿಳಿಸಿದ ಅವರು, ಪ್ರಾಣ ಹೋಗುವವರೆಗೆ ಸಲ್ಲೇಖನ ಮಾಡುತ್ತೇನೆ ಎಂದರು.