ಬೆಂಗಳೂರು : ಬೆಂಗಳೂರು ನಗರದ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ನೊಬ್ಬನನ್ನು ಹಳೇ ದ್ವೇಷದ ಹಿನ್ನೆಲೆಯಲ್ಲಿ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮಡಿವಾಳ ಠಾಣೆ ರೌಡಿಶೀಟರ್ ಕಫಿಲ್ ಎಂಬಾತನೇ ಹತ್ಯೆಗೀಡಾಗಿದ್ದು, ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಡಿಮಾರ್ಟ್ ಬಳಿ ಈ ಘಟನೆ ಜರುಗಿದೆ. ಹತ್ಯೆಯ ಹಿಂದಿನ ಸ್ವಷ್ಟ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಹತ್ಯೆ ಮಾಡಿ ಪರಾರಿಯಾದ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ಆರಂಭಿಸಿದ್ದಾರೆ.

2012 ರಲ್ಲಿ ನಕ್ರ ಬಾಬುವಿನ ಕೊಲೆ ಪ್ರಕರಣದ ಆರೋಪಿಯಾಗಿದ್ದ ಕಫಿಲ್ ನನ್ನು ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ದೂರು ದಾಖಲಿಸಿ ತನಿಖೆ ಕೈಗೊಂಡಿರುವ ಡಿಜೆ ಹಳ್ಳಿ ಪೊಲೀಸರು ತಿಳಿಸಿದ್ದಾರೆ.




