Action Will be Taken Against Rotten Chicken Eggs Suppliers: ಕಳಪೆ ಮೊಟ್ಟೆ ಪೂರೈಕೆ ದಾರರನ್ನು ಕಪ್ಪು ಪಟ್ಟಿಗೆ ಸೇರ್ಪಡೆ: ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಂಗಳೂರು: ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂಬುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಖ್ಯ ಉದ್ದೇಶ. ಆದರೆ ನಮ್ಮ ಇಲಾಖೆಯ ಉದ್ದೇಶವೇ ಎಡವುತ್ತಿರುದು ಗಮನಕ್ಕೆ ಬಂದಿದೆ. ಕಳಪೆ ಮೊಟ್ಟೆ ಪೂರೈಕೆದಾರರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಗರ್ಭಿಣಿಯರು ಹಾಗೂ ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆಗಳನ್ನು ವಿತರಣೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಲಕ್ಷ್ಮಿಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಡೆದಿತ್ತು. ಅದರ ಬೆನ್ನಲ್ಲೇ ಹಾವೇರಿ, ಕೊಡಗು ಜಿಲ್ಲೆಯಲ್ಲೂ ಇದೇ ರೀತಿಯ ಪ್ರಕರಣ ದಾಖಲಾಗಿತ್ತು. ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ಪೂರೈಕೆ ಆರೋಪದ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಳಪೆ ಮೊಟ್ಟೆ ಪೂರೈಕೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಕಳಪೆ ಮೊಟ್ಟೆ ಪೂರೈಕೆ ದಾರರನ್ನು ಸಪ್ಲೈ ಲಿಸ್ಟ್ ನಿಂದಲೂ ಕೈ ಬಿಡುವಂತೆ ಸೂಚನೆ ನೀಡಿದ್ದೇನೆ. ಖರೀದಿ ವಿಕೇಂದ್ರೀಕರಣ ಮಾಡಿದ ಕಾರಣದಿಂದ ಗ್ರಾಮ ಪಂಚಾಯತಿ ಮಟ್ಟದಲ್ಲೂ ಖರೀದಿ ಆಗುತ್ತಿದೆ. ಯಾವುದೇ ಕಂಟ್ರೋಲ್ ಇಲ್ಲದೆ ಖರೀದಿ ನಡೆಯುತ್ತಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂಬುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಖ್ಯ ಉದ್ದೇಶ.ಆದರೆ ನಮ್ಮ ಇಲಾಖೆಯ ಉದ್ದೇಶವೇ ಎಡವುತ್ತಿರುದು ಗಮನಕ್ಕೆ ಬಂದಿದೆ. ಮೊಟ್ಟೆ ವಿಚಾರ ವನ್ನು ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ. ಇಲಾಖೆಯ ಉದ್ದೇಶ ಈಡೇರಿಸಲು ಬದ್ಧವಾಗಿದ್ದೇವೆ ಎಂದು ತಿಳಿಸಿದರು.

More News