ಬೆಂಗಳೂರು: ಎಸ್ಸಿ ಎಸ್ಟಿ ಸಮುದಾಯದ ಗುತ್ತಿಗೆದಾರರಿಗೆ ಟೆಂಡರ್ ಪ್ರಕ್ರಿಯೆಯಿಂದ ವಿನಾಯಿತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಗಳಲ್ಲಿನ ಪಾರದರ್ಶಕತೆ ಕಾಯ್ದೆ
ತಿದ್ದುಪಡಿ ಮಾಡಿ 50 ಲಕ್ಷದಿಂದ 1 ಕೋಟಿಗೆ ಹೆಚ್ಚಳ ಮಾಡಿರುವುದು ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧೇಯಕದ ಪರ್ಯಾಲೋಚನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ ಸಿಎಸ್ಟಿ ಸಮುದಾಯದ ಗುತ್ತಿಗೆದಾರರಿಗೆ ಟೆಂಡರ್ ವಿನಾಯತಿಯಲ್ಲಿ ಐವತ್ತು ಲಕ್ಷದಿಂದ ಒಂದು ಕೋಟಿ ರೂ. ಗೆ ಹೆಚ್ಚಳ ಮಾಡುವ ತಿದ್ದುಪಡಿ ಮಾಡಿರುವುದು ಸ್ವಾಗತಾರ್ಹ ಎಂದರು.

ಈ ಕಾಯ್ದೆ ಜಾರಿ ಬಂದ ಮೇಲೆ ಎಸ್ಸಿ ಎಸ್ಟಿ ಸಮುದಾಯದವರು ಉತ್ಸಾಹದಿಂದ ಕೆಲಸ ಮಾಡಲು ಮುಂದೆ ಬರುತ್ತಿದ್ದಾರೆ. ಹಣಕಾಸು ಸಂಸ್ಥೆಗಳು ಸಾಲ ನೀಡಲು ಮುಂದೆ ಬರುತ್ತಿವೆ. ಇದು ನಮ್ಮ ಪಕ್ಷದ ನಿಲುವು ಕೂಡ ಆಗಿತ್ತು. ಸರ್ಕಾರದ ಈ ಕಾಯ್ದೆ ಸ್ವಾಗತಾರ್ಹ ಎಂದು ಹೇಳಿದರು.