MANIPUR VIOLENCE: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡೇಟಿಗೆ ಮಹಿಳೆ ಸಾವು: 3 ಟ್ರಕ್ ಗಳಿಗೆ ಬೆಂಕಿ

ಇಂಫಾಲ : ಸ್ವಲ್ಪ ಮಟ್ಟಿಗೆ ಹತೋಟಿಗೆ ಬಂದಿದ್ದ ಮಣಿಪುರ ಹಿಂಸಾಚಾರ ಇಂದು ಮತ್ತೆ ಭುಗಿಲೆದ್ದಿದೆ. ಮಣಿಪುರದ ರಾಜಧಾನಿ ಇಂಫಾಲದ ಪೂರ್ವದಲ್ಲಿ ದುಷ್ಕರ್ಮಿಗಳ ಗುಂಪುವೊಂದು ಮನೆಯೊಳಗೆ ನುಗ್ಗಿ ಮಹಿಳೆಯೊಬ್ಬರ ಮುಖಕ್ಕೆ ಗುಂಡು ಹಾರಿಸಿ ಸಾಯಿಸಿದೆ.
ದುಷ್ಕರ್ಮಿಗಳು ಸುಮಾರ್ 50 ವರ್ಷ ವಯಸ್ಸಿನ ಮಹಿಳೆಯ ಮನೆಗೆ ನುಗ್ಗಿ ಅವರ ಮುಖ ಮೇಲೆ ಗುಂಡು ಹಾರಿಸಿ ಸಾಯಿಸಿದ್ದಾರೆ, ಜತೆಗೆ ದಾಳಿಕೋರರು ತೆರಳುವಾಗ ಮಹಿಳೆಯ ಮುಖವನ್ನು ವಿರೋಪಗೊಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದುಷ್ಕರ್ಮಿಗಳು ದುಷ್ಕತ್ಯವೆಸಗಿ ಪರಾರಿಯಾಗಿದ್ದಾರೆ. ಆರೋಪಿಗಳನ್ನು ಬಂಧಿಸಲು ಮಣಿಪುರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಹಾಗೆಯೇ ಗುಂಡು ಹಾರಿಸಿದ ಸುತ್ತಮುತ್ತಲಿನ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದು, ಪ್ರತಿ ಮನೆಯನ್ನೂ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ಜನರ ಹೇಳಿಕೆಗಳನ್ನು ಪಡೆಯಲಾಗುತ್ತಿದೆ. ಹಿಂಸಾಚಾರ ನಡೆದ ಸ್ವಲ್ಪ ಹೊತ್ತಿನಲ್ಲೇ ಮೂರು ಲಾರಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಮೇ ತಿಂಗಳಲ್ಲಿ ಹಿಂಸಾಚಾರ ಆರಂಭಗೊಂಡಿತ್ತು. ಕಳೆದ ಒಂದು ವಾರದಿಂದ ಶಾಂತಿ ಮೂಡಿತ್ತು., ನಿನ್ನೆ ನಡೆದ ಈ ದಾಳಿಯಿಂದ ಮತ್ತೆ ಹಿಂಸಾಚಾರ ಭುಗಿಲೇಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

More News