Mamata Banerjee: ನಮ್ಮ ಯುದ್ಧದಲ್ಲಿ ಇಂಡಿಯಾ ಗೆಲ್ಲಲಿದೆ, ಬಿಜೆಪಿ ಸೋಲಲಿದೆ: ಮಮತಾ ಬ್ಯಾನರ್ಜಿ

ಬೆಂಗಳೂರು: ನಮ್ಮ ಯುದ್ಧದಲ್ಲಿ ಇಂಡಿಯಾ ಗೆಲ್ಲಲಿದೆ, ಬಿಜೆಪಿ ಸೋಲಲಿದೆ. ಈ ಮೈತ್ರಿಗೆ ಒಪ್ಪಿ ಬಂದಿರುವ ಎಲ್ಲಾ ಪಕ್ಷಗಳಿಗೆ ಧನ್ಯವಾದಗಳು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.

ಇಂದಿನಿಂದ ನಿಜವಾದ ಸವಾಲು ಆರಂಭವಾಗಿದೆ. ನಮ್ಮ ಮೈತ್ರಿ 26 ಪಕ್ಷಗಳ ನಡುವೆ ನಡೆದಿದೆ. ಮೊದಲು ಯುಪಿಎ ಹೆಸರಿನಲ್ಲಿ ಇತ್ತು. ಈಗ ಹೊಸ ಹೆಸರಿನಿಂದ ಕರೆಯಲ್ಪಡಲಿದೆ. ಎನ್ಡಿಎ ಈ ಹಿಂದೆ ಇತ್ತು, ಆದರೆ ಇಷ್ಟು ದಿನ ಅಸ್ತಿತ್ವದಲ್ಲಿ ಇರಲಿಲ್ಲ.

ದಲಿತರು, ಅಲ್ಪಸಂಖ್ಯಾತರು, ಹಿಂದೂ, ಮುಸಲ್ಮಾನ, ಸಿಖ್, ಅರುಣಾಚಲ ಪ್ರದೇಶ, ಮಣಿಪುರ, ಉ.ಪ್ರ. ದೆಹಲಿ, ಬಂಗಾಳ, ಬಿಹಾರ, ಮಹಾರಾಷ್ಟ್ರ ಎಲ್ಲ ಕಡೆ ಅಪಾಯವಿದೆ. ಜನರಿಂದ ಆಯ್ಕೆಯಾದ ಸರ್ಕಾರ ಕೆಡವು, ಮಾರಾಟ ಮಾಡುವುದು ಈ ಸರ್ಕಾರದ ಕೆಲಸವಾಗಿದೆ. ಹೀಗಾಗಿ ಇಂದು ನಾವೆಲ್ಲರೂ ಸೇರಿ ಇಂಡಿಯಾ ಎಂಬ ಮೈತ್ರಿಕೂಟವನ್ನು ಸ್ಥಾಪಿಸಿದ್ದೇವೆ. ಬಿಜೆಪಿ ಹಾಗೂ ಎನ್ ಡಿಎ ಇಂಡಿಯಾ ಸವಾಲನ್ನು ಎದುರಿಸಲು ಸಾಧ್ಯವೇ?

ಯುವಕರು, ರೈತರು, ಉತ್ತಮ ಆರ್ಥಿಕತೆ, ವಿದ್ಯಾರ್ಥಿಗಳು, ದಲಿತರು, ದೇಶದ ಪರವಾಗಿ ನಾವು ಇದ್ದೇವೆ. ನಮ್ಮ ಸವಾಲುಗಳು, ಹೋರಾಟ, ಪ್ರಾಚಾರ ಎಲ್ಲವನ್ನು ಇಂಡಿಯಾ ಅಡಿಯಲ್ಲಿ ಮಾಡಲಾಗುವುದು. ನಿಮಗೆ ಸಾಧ್ಯವಾದರೆ ನಮ್ಮನ್ನು ತಡೆಯಿರಿ. ವಿಪತ್ತಿನಿಂದ ಭಾರತವನ್ನು ರಕ್ಷಣೆ ಮಾಡಿ. ಭಾರತೀಯರನ್ನು ರಕ್ಷಿಸಿ.

ಬಿಜೆಪಿ ದೇಶವನ್ನು ಮಾರುವುದರಲ್ಲಿ, ಲೋಕತಂತ್ರ ಖರೀದಿಸುವಲ್ಲಿ ಮಗ್ನವಾಗಿದೆ. ಇದೇ ಕಾರಣಕ್ಕೆ ಯಾವುದೇ ಸಂಸ್ಥೆಗಳು ಸ್ವತಂತ್ರ್ಯವಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ಯಾವುದೇ ವಿರೋಧ ಪಕ್ಷಗಳ ನಾಯಕರು ಧ್ವನಿ ಎತ್ತಿದರೆ ಅವರ ವಿರುದ್ಧ ಐಟಿ, ಇಡಿ ದಾಳಿ ಮಾಡಲಾಗುತ್ತಿದೆ.

ನಮ್ಮ ಯುದ್ಧದಲ್ಲಿ ಇಂಡಿಯಾ ಗೆಲ್ಲಲಿದೆ, ಬಿಜೆಪಿ ಸೋಲಲಿದೆ. ಈ ಮೈತ್ರಿಗೆ ಒಪ್ಪಿ ಬಂದಿರುವ ಎಲ್ಲಾ ಪಕ್ಷಗಳಿಗೆ ಧನ್ಯವಾದಗಳು. ನಮ್ಮ ಮುಂದಿನ ಸಭೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆಯಲಿದೆ.

More News