ಬೆಂಗಳೂರು : ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು 20ಸಾವಿರ ಕೋಟಿ ರೂಪಾಯಿ ಹಣವನ್ನು ವಿನಿಯೋಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದರು. ಆದರೆ, ಇದುವರೆಗೂ ಒಂದೇ ಒಂದು ಗುಂಡಿ ಮುಚ್ಚದೇ ವಾಹನ ಸವಾರರಿಗೆ ದಿನನಿತ್ಯ ಸಾವಿನೊಂದಿಗೆ ಸೆಣಸಾಟ ನಡೆಸುತ್ತಿದ್ದಾರೆ. ಇದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಇಂದು ರಸ್ತೆ ಗುಂಡಿ ಹಬ್ಬವನ್ನು ಆಚರಿಸಿದರು.
ಬೆಂಗಳೂರು ನಗರದ ವಿವಿಧೆಡೆಗಳಲ್ಲಿ ರಸ್ತೆ ಗುಂಡಿಗಳಿಗೆ ಹೂವಿನ ಹಾರ ಹಾಕಿ ಪ್ರತಿಭಟನೆ ನಡೆಸಿದ ಆಪ್ ಕಾರ್ಯಕರ್ತರು, ಇಪ್ಪತ್ತು ಸಾವಿರ ಕೋಟಿ ರೂಪಾಯಿಗಳಲ್ಲಿ ಬೃಹತ್ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು.

ರಸ್ತೆ ಗುಂಡಿಗಳು ವಿಪರೀತ ಹೆಚ್ಚಾಗಿ, ವಾಹನ ಸವಾರರ ಜೀವ ತೆಗೆಯುವಷ್ಟು ಅಪಾಯಕಾರಿ ಮಟ್ಟ ತಲುಪಿರುವುದನ್ನು ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಖಂಡಿಸಿದರು. ಇಪ್ಪತ್ತು ಸಾವಿರ ಕೋಟಿ ರೂಪಾಯಿ ಲೆಕ್ಕ ಕೋಡಿ ಎಂದು ಆಗ್ರಹಿಸಿದ ಪ್ರತಿಭಟನಾಕಾರರು,ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳ್ನು ಕೂಗಿದರು

.
ಜನಪ್ರತಿನಿಧಿಗಳು ತಮ್ಮ ಜೇಬು ತುಂಬಿಸಿಕೊಳ್ಳಲು ಕಳಪೆ ಕಾಮಗಾರಿ ಮಾಡಿದೆ ಎಂದ ಅವರು, ಪ್ರತಿವರ್ಷ ಅಕ್ಟೋಬರ್ 21 ರಸ್ತೆ ಗುಂಡಿ ಹಬ್ಬವನ್ನಾಗಿ ಆಚರಿಸಲು ಸರ್ಕಾರ ಅಧಿಸೂಚನೆ ಹೊರಡಿಸಬೇಕೆಂದು ಆಗ್ರಹಿಸಿದರು.




