LOKAYUKTHA RAID: ಲೋಕಾಯುಕ್ತ ದಾಳಿ: ಡಿಡಿಪಿಐ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ

ಹಾವೇರಿ: ನಿವೃತ್ತ ಶಿಕ್ಷಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಡಿಡಿಪಿಐ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆ ಸಿಕ್ಕಿಬಿದ್ದಿದ್ದಾರೆ.
ಇಂದು ನಡೆದ ದಾಳಿಯಲ್ಲಿ ಡಿಡಿಪಿಐ ಅಂದಾನಪ್ಪ ವಡಗೇರಿ ಹಾಗೂ ಕೇಸ್ ವರ್ಕರ್ ದತ್ತಾತ್ರೇಯ ಕುಂಟೆ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ರಟ್ಟೀಹಳ್ಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಮಹಮ್ಮದ್ ಗೌಸ್ ಎಂಬ ಶಿಕ್ಷಕರು ತಮ್ಮ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಅಗತ್ಯ ದಾಖಲಾತಿಗಳನ್ನು ನೀಡಿ, ಅದನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಲು ಕೋರಿದ್ದರು.

ನಿವೃತ್ತಿ ವೇತನಕ್ಕಾಗಿ ಡಿಡಿಪಿಐ 7 ಸಾವಿರ ರೂ. ಲಂಚ ಕೇಳಿದ್ದರು, 7 ಸಾವಿರ ರೂ.ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯಲ್ಲಿ ಅಧಿಕಾರಿಗಳು ಸಿಲುಕಿದ್ದಾರೆ.

More News