ಬೆಂಗಳೂರು: ಇಂದು ಸಂಜೆ ದೇಶದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ರವರನ್ನು ಅವರ ಮನೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೌಹಾರ್ದ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು.

ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ , ಸಂವಿಧಾನವನ್ನು ಹಾಗೂ ದೇಶದ ಒಕ್ಕೂಟ ವ್ಯವಸ್ಥೆಯನ್ನು ಉಳಿಸಲು ದೆಹಲಿ ರಾಜ್ಯ ಸರ್ಕಾರದ ವಿರುದ್ಧ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಬೇಕೆಂದು ಮುಖ್ಯಮಂತ್ರಿ ಚಂದ್ರು ಮನವಿ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ ಇದ್ದರು.




