DEMAND FOR REINVESTIGATION OF SOUJANYA CASE: ಸೌಜನ್ಯ ಪ್ರಕರಣ ಮರುತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು : ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆಗೆ ಒತ್ತಾಯಿಸಿ ಅನೇಕ ಪ್ರಗತಿಪರ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿದವು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅನೇಕ ಪ್ರಗತಿಪರ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಹಾಗೂ ಮರುತನಿಖೆಗೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಸೌಜನ್ಯ ಅತ್ಯಾಚಾರ ಪ್ರಕರಣವನ್ನ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ 30 ಕ್ಕೂ ಹೆಚ್ಚು ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
2012, ಅಕ್ಟೋಬರ್ 9 ರಂದು ಸೌಜನ್ಯ ಅವರ ಕೊಲೆ ನಡೆದಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ ವಿಶೇಷ ನ್ಯಾಯಾಲಯ 11 ವರ್ಷಗಳ ಬಳಿಕ ಆರೋಪಿ ಸಂತೋಷ್ ರಾವ್ ನಿರ್ದೋಷಿ ಅಂತಾ ತೀರ್ಪು ನೀಡಿತ್ತು.

ಈ ಪ್ರಕರಣವನ್ನ ಉನ್ನತಮಟ್ಟದ ತನಿಖೆಗೆ ವಹಿಸಬೇಕು. ಯಾರನ್ನೋ ಉಳಿಸುವ ಪ್ರಯತ್ನ ಆಗಬಾರದೆಂದು ಪ್ರತಿಭಟನೆಯಲ್ಲಿ ಭಾಗಿಯಾದ ಮಹಿಳೆಯರು ಸರ್ಕಾರವನ್ನು ಒತ್ತಾಯಿಸಿದರು. ಇನ್ನೂ ಈ ಪ್ರತಿಭಟನೆಯಲ್ಲಿ ಸೌಜನ್ಯಳ ತಾಯಿ ಕುಸುಮಾವತಿ ಕೂಡ ಭಾಗಿಯಾಗಿ, ಮಗಳ ಸಾವಿಗೆ ನ್ಯಾಯ ಸಿಗಬೇಕೆಂದು ಭಾವುಕರಾದರು.

ಆದ್ದರಿಂದ ಇದೀಗ ಮತ್ತೆ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಅವರ ಪೋಷಕರು ಹಾಗೂ ಪ್ರಗತಿಪರ ಚಿಂತಕರ ಸಂಘಟನೆನೂ ಆಗ್ರಹಿಸಿವೆ.

More News