BJP LEADER ARREST: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಟ್ವೀಟ್: ಬಿಜೆಪಿ ಮುಖಂಡರಾದ ಶಕುಂತಲ ಬಂಧನ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆಯನ್ನು ಬೆಂಗಳೂರಿನ ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸಿಎಂ ವಿರುದ್ದ ಟ್ವಿಟರ್ ಹಾಗೂ ಫೇಸ್ ಬುಕ್ ನಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎನ್ನುವವವರು ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಉಡುಪಿ ಕಾಲೇಜಿನ ನಗ್ನ ವಿಡಿಯೋ ಶೂಟಿಂಗ್ ವಿಚಾರವಾಗಿ ಕಾಂಗ್ರೆಸ್ ಅಧಿಕೃತ ಟ್ವಿಟರ್ ನಲ್ಲಿ ಶಕುಂತಲಾ ಪೋಸ್ಟ್ ಮಾಡಿದ್ದರು.
ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಎಂದು ನಕಲಿ ಸುದ್ದಿ ಸೃಷ್ಠಿಸಿ ಕೋಮು ಪ್ರಚೋದನೆಗೆ ಮುಂದಾಗಿರುವ ಬಿಜೆಪಿ ತೀರ್ಥಹಳ್ಳಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಎಬಿವಿಪಿ ಅಧ್ಯಕ್ಷನ ಅಸಲಿ ಸುದ್ದಿಯ ಬಗ್ಗೆ ಮೌನ ಮುರಿಯುವುದು ಯಾವಾಗ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.

ಹಾಗೆಯೇ ವಿದ್ಯಾರ್ಥಿನಿಯರ ಮಕ್ಕಳಾಟವನ್ನು ರಾಜಕೀಯದ ಕಳ್ಳಾಟಕ್ಕೆ ಬಳಸಿಕೊಳ್ಳಲು ಉಪ್ಪು ಖಾರ, ಮಸಾಲೆಗಳನ್ನು ಬೆರಸಿ ಚಪ್ಪರಿಸಲು ಹೊರಟಿದ್ದ ಬಿಜೆಪಿ ಕರ್ನಾಟಕಗೆ ನಮ್ಮ ದಕ್ಷ ಪೊಲೀಸರು ತಡಮಾಡದೇ ತನಿಖೆ ಮಾಡಿ ಸತ್ಯಾಂಶ ಬಯಲಿಗೆಳೆದು ನಿರಾಸೆ ಮೂಡಿಸಿದ್ದಾರೆ ಎಂದು ಕಾಂಗ್ರೆಸ್ ತನ್ನ ಅಧಿಕೃತ ಟ್ವೀಟರ್ ಖಾತೆ ಟ್ವೀಟ್ ಮಾಡಿತ್ತು.
ಇದಕ್ಕೆ ಬಿಜೆಪಿ ಮುಖಂಡೆ ಶಕುಂತಲಾ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ ಅವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊನೆ ಅಥವಾ ಹೆಂಡತಿ ಅವರ ವಿಡಿಯೋವನ್ನು ಇದೆ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಪುತ್ತೀರಾ ಎಂದು ಪ್ರಶ್ನಿಸಿದ್ದರು.
ಶಕುಂತಲಾ ಅವರ ಈ ಟ್ವೀಟ್ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದನ್ನ ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ನೀಡಿದ್ದ ದೂರಿ ಅನ್ವಯ ಹೈಗ್ರೌಂಡ್ಸ್ ಪೊಲೀಸರು ದೂರು ದಾಖಲಿಸಿ, ಶಕುಂತಾಳನ್ನ ಬಂಧಿಸಿದ್ದಾರೆ.

More News