ಮಹಾರಾಷ್ಟ್ರ : ಜೈಪುರದಿಂದ ಮುಂಬಯಿಗೆ ತೆರಳುತ್ತಿದ್ದ ಪ್ರಯಾಣಿಕರ ರೈಲಿನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ನಾಲ್ವರು ಪ್ರಯಾಣಿಕರು ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಜರುಗಿದೆ. ಇದರಲ್ಲಿ ಆರ್ ಪಿಎಫ್ ನ ಎಎಸ್ ಐ ಕೂಡ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗ್ಗೆ ಸುಮಾರು 5 ಗಂಟೆಯ ವೇಳೆಗೆ ಬೊರಿವೆಲಿಯಿಂದ ಮೀರಾ ರೋಡ್ ನಿಲ್ದಾಣದ ನಡುವಿನ ಪಾಲ್ವರ್ ಬಳಿ ಈ ಘಟನೆ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೈಲು ಮುಂಬಯಿಗೆ ತೆರಳುತ್ತಿದ್ದಾಗ ಆರ್ ಪಿ ಎಫ್ ಸೈನಿಕ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ, ಈ ಸಂಬಂಧ ಸೈನಿಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.




