CM MARATHON MEETING WITH UNION GOVT. LEADERS: ನವದೆಹಲಿಯಲ್ಲಿ ಪ್ರಧಾನಿ, ರಕ್ಷಣಾ ಸಚಿವರು, ಹಣಕಾಸು ಸಚಿವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಎರಡು ದಿನಗಳ ನವದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಕಾಂಗ್ರೆಸ್ ಪಕ್ಷದ ವರಿಷ್ಠರು ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದರು. ನಂತರ ಇಂದು ಕಾಂಗ್ರೆಸ್ ವರಿಷ್ಠ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮೈಸೂರು ದಸರಾ ಬೊಂಬೆ ಮತ್ತು ಮೈಸೂರು ಪೇಟೆ ಪ್ರಧಾನಿಯವರಿಗೆ ನೀಡಿದರು.

ಸಿಎಂ ಸಿದ್ದರಾಮಯ್ಯ ಅವರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದರು.

More News

You cannot copy content of this page